Mysore
20
broken clouds

Social Media

ಶುಕ್ರವಾರ, 30 ಜನವರಿ 2026
Light
Dark

70ನೇ ಕನ್ನಡ ರಾಜ್ಯೋತ್ಸವ: ಮೈಸೂರಿನ ಓವಲ್ ಮೈದಾನದಲ್ಲಿ ಧ್ವಜಾರೋಹಣ.

ಮೈಸೂರು: ಇಂದು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೈಸೂರಿನ ಓವಲ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರಿಸಿದ ನಂತರ ತೆರದ ವಾಹನದಲ್ಲಿ ಗೌರವ ವಂದನೆ ಸ್ವೀಕರಿಸಿದರು.

ಇದನ್ನು ಓದಿ: ಕನ್ನಡ ರಾಜ್ಯೋತ್ಸವ: ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಇನ್ನು ಧ್ವಜಾರೋಹಣಕ್ಕೂ ಮುನ್ನ ಸಚಿವ ಎಚ್.ಸಿ.ಮಹದೇವಪ್ಪ ಅವರು, ಮೈಸೂರು ಅರಮನೆಯಲ್ಲಿರುವ ರಾಜ್ಯದ ಏಕೈಕ ಜಯಭುವನೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಜೈಭುವನೇಶ್ವರಿ ಮೂರ್ತಿಯನ್ನು ವಾಹನಲ್ಲಿಟ್ಟು ಓವಲ್ ಮೈದಾನದವರೆಗೆ ಮೆರವಣಿಗೆ ನಡೆಸಲಾಯಿತು. ಈ ಮೆರವಣಿಗೆಗೆ ಸಚಿವ ಡಾ.ಎಚ್.ಸಿ ಮಹದೇವಪ್ಪ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಚಾಲನೆ ನೀಡಿದರು.

ಬಳಿಕ ಓವಲ್‌ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ತೆರೆದ ವಾಹನದಲ್ಲಿ ಗೌರವ ವಂದನೆ ಸ್ವೀಕರಿಸಿದರು.

Tags:
error: Content is protected !!