ಮೈಸೂರು ನಗರ

ಫೆಬ್ರವರಿ ವೇಳೆಗೆ ಜೆಡಿಎಸ್‌ನ 9 ಶಾಸಕರು ಕಾಂಗ್ರೆಸ್‌ ಪಕ್ಷಕ್ಕೆ ಬರಲಿದ್ದಾರೆ: ಎಂ.ಲಕ್ಷ್ಮಣ್‌ ಹೊಸ ಬಾಂಬ್‌

ಮೈಸೂರು: ಜೆಡಿಎಸ್‌ನ 9 ಶಾಸಕರು ಕಾಂಗ್ರೆಸ್‌ ಪಕ್ಷಕ್ಕೆ ಬರಲು ಈಗಾಗಲೇ ತಯಾರಿ ನಡೆಸಿದ್ದು, ಫೆಬ್ರವರಿ ವೇಳೆಗೆ ಅವರೆಲ್ಲಾ ಕಾಂಗ್ರೆಸ್‌ ಸೇರಲಿದ್ದಾರೆ ಎಂದು ಕಾಂಗ್ರೆಸ್‌ ವಕ್ತಾರ ಎಂ. ಲಕ್ಷ್ಮಣ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಭಾಗದ ಐವರು ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದು, ಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿಯಾಗಿರುವ ಕಾರಣದಿಂದ ಕಾಂಗ್ರೆಸ್‌ ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ. ಫೆಬ್ರವರಿಯಲ್ಲಿ ಹೈಕಮಾಂಡ್‌ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಇನ್ನು ನಾವು ಪಕ್ಷ ಬಿಟ್ಟು ಬರುವುದಿಲ್ಲ ಅಂತ ಹೇಳಿದವರೆಲ್ಲಾ ಈಗ ಕಾಂಗ್ರೆಸ್‌ ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ. ನಮಗೆ ಅವರ ಅವಶ್ಯಕತೆ ಇಲ್ಲ. ಆದರೆ ಅವರೇ ಈಗ ಬರುತ್ತೀವಿ ಎಂದು ದುಂಬಾಲು ಬಿದ್ದಿರುವುದರಿಂದ ನಾವು ಅವರನ್ನು ಲೆಕ್ಕಕ್ಕೆ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ಮೈಸೂರಿನಲ್ಲಿ ʼದಿಶಾʼ ಸಭೆ ನಡೆಸುತ್ತಿರುವುದಕ್ಕೆ ಸ್ವಾಗತಿಸಿದರು. ಈ ಸಭೆಯ ಮೂಲಕ ಕೈಗಾರಿಕಾ ಕ್ಷೇತ್ರದಲ್ಲಿ ಹಾಗೂ ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬಹುದು. ಈ ಹಿನ್ನೆಲೆಯಲ್ಲಿ ದಿಶಾ ಸಭೆ ಮಾಡುವುದು ಉತ್ತಮ ಕೆಲಸ ಎಂದು ಸಂತಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago