ಮೈಸೂರು ನಗರ

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡಿಲ್ಲ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಟೀಕೆ ಮಾಡಿದ್ದಾರೆ.

ಮೈಸೂರು ಪಾಲಿಕೆ ಬಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮೇಯರ್‌ ಶಿವಕುಮಾರ್‌ ಅವರು, ನಾನು ಮೇಯರ್ ಆಗಿದ್ದಾಗ ಪಾರಂಪರಿಕ ಕಮಾನುಗಳ ರಕ್ಷಣೆಗಾಗಿ 3 ಕೋಟಿ ರೂ ಅನುದಾನ ಮೀಸಲಿಟ್ಟಿದ್ದೆ. ಪಾರಂಪರಿಕ ಇಲಾಖೆಗೆ ಪ್ರಸ್ತಾವನೆಯನ್ನೂ ಸಲ್ಲಿಸಿದರೂ ಅನುದಾನ ಬಳಕೆ ಆಗಲಿಲ್ಲ. ಮೈಸೂರು ಪಾರಂಪರಿಕ ನಗರ ಎಂದು ಪ್ರಸಿದ್ದಿಯಾಗಿದೆ. ಇಲ್ಲಿನ ಪಾರಂಪರಿಕ ಕಟ್ಟಡಗಳನ್ನು ಉಳಿಸುವುದು ಪಾಲಿಕೆಯ ಆದ್ಯತೆ ಕರ್ತವ್ಯ ಆಗಬೇಕಿತ್ತು. ವರ್ಷಕ್ಕೊಂದು ಪಾರಂಪರಿಕ ಕಟ್ಟಡ ಸಂರಕ್ಷಿಸಲು ಮುಂದಾಗಿದ್ದರೂ ಎಷ್ಟೋ ಅನುಕೂಲ ಆಗುತ್ತಿತ್ತು. ಆದರೆ ಇಡೀ ಬಜೆಟ್‌ನಲ್ಲಿ ಪಾರಂಪರಿಕ ಕಟ್ಟಡಗಳ ಬಗ್ಗೆ ಪ್ರಸ್ತಾಪವೇ ಇಲ್ಲದ ಇರುವುದು ನಿರಾಸೆ ಮೂಡಿಸಿದೆ ಎಂದು ಹೇಳಿದರು.

 

 

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

3 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

7 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago