ಮೈಸೂರು ನಗರ

ಚಿಂದಿ ಆಯುವ ಯುವಕರ ಜಗಳ : ಓರ್ವ ಕೊಲೆಯಲ್ಲಿ ಅಂತ್ಯ

ಮೈಸೂರು : ನಗರದಲ್ಲಿ ಮತ್ತೊಂದು ಕೊಲೆ ಪ್ರಕರಣ ವರದಿಯಾಗಿದೆ. ಚಿಂದಿ ಆಯುವ ಯುವಕರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ನಡೆದ ಅಲ್ಪ ಸಮಯದಲ್ಲಿಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಶಿವಮೊಗ್ಗ ಮೂಲದ ಶಶಿಕುಮಾರ್ ಅಲಿಯಾಸ್ ಕೆಂಚ ಎಂಬಾತನೇ ಕೊಲೆಗೀಡಾದವನು. ಆತನ ಸ್ನೇಹಿತರಾದ ನರಸಿಂಹ, ಸೀನ ಹಾಗೂ ಪ್ರಭು ಎಂಬವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಭಾನುವಾರ ರಾತ್ರಿ ನಗರದ ಚಾಮರಾಜ ಜೋಡಿ ರಸ್ತೆಯ ಗಾಯತ್ರಿ ಚಿತ್ರಮಂದಿರದ ಮುಂಭಾಗ ಈ ಘಟನೆ ನಡೆದಿದೆ. ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದ ನಾಲ್ವರೂ ಕೂಡ ಸ್ನೇಹಿತರಾಗಿದ್ದು, ಮಾದಕ ವಸ್ತು ಸೇವನೆಯ ಚಟಕ್ಕೆ ದಾಸರಾಗಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

ಭಾಣುವಾರ ರಾತ್ರಿ ನಶೆಯಲ್ಲಿ ಇದ್ದ ಶಶಿಕುಮಾರ್ ಹಾಗೂ ನರಸಿಂಹನ ನಡುವೆ ಮಾತಿನ ಚಕಮಕಿ ನಡೆದು, ಕೈಕೈ ಮಿಲಾಯಿಸುವ ಹಂತ ತಲುಪಿದೆ. ಈ ವೇಳೆ ನರಸಿಂಹ ಹಾಗೂ ಇತರ ಇಬ್ಬರೂ ಸೇರಿ ಕಲ್ಲು ಹಾಗೂ ಕಬ್ಬಿಣದ ರಾಡ್‌ನಿಂದ ಶಶಿಕುಮಾರ್ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ.

ಇದನ್ನೂ ಓದಿ:-ಡಿ.13,14 ರಂದು ಬನವಾಸಿ ತೋಟದಲ್ಲಿ ಅರಿವಿನ ಚಾವಡಿ ಕಾರ್ಯಕ್ರಮ

ಸೋಮವಾರ ಬೆಳಿಗ್ಗೆ ದಾರಿಹೋಕರು ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಕೃಷ್ಣರಾಜ ಠಾಣೆ ಪೊಲೀಸರು, ಶವವನ್ನು ಕೆಆರ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಶವದ ಪಕ್ಕದಲ್ಲಿಯೇ ಮಲಗಿದ್ದ: ಶಶಿಕುಮಾರ್ ಮೇಲೆ ಹಲ್ಲೆ ನಡೆಸಿದ ಮೂವರಲ್ಲಿ ನರಸಿಂಹ ಎಂಬಾತ ನಶೆಯ ಕಾರಣದಿಂದ ಶವದ ಪಕ್ಕದಲ್ಲಿಯೇ ಮಲಗಿದ್ದ. ತಕ್ಷಣವೇ ಆತನನ್ನು ವಶಕ್ಕೆ ಪಡೆದ ಪೊಲೀಸರು ಉಳಿದವರನ್ನೂ ಬಂಧಿಸಿದ್ದಾರೆ.

ಕೊಲೆ ಆರೋಪಿಗಳು: ಮೃತ ಶಶಿಕುಮಾರ್ ಹಾಗೂ ನರಸಿಂಹ ಅವರುಗಳು ಈ ಹಿಂದೆ ಕಾಡಾ ಕಚೇರಿ ಆವರಣದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು. ಶಿಕ್ಷೆ ಅನುಭವಿಸಿದ ನಂತೆ ಕಳೆದ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಿದ್ದರು ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

10 mins ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

24 mins ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

44 mins ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

1 hour ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

2 hours ago

ಸರಗೂರಿನ ನೇರಳೆ ಗ್ರಾಮಕ್ಕೆ ನೇರ ಬಸ್‌ ಕಲ್ಪಿಸಿ : ಗ್ರಾಮಸ್ಥರ ಆಗ್ರಹ

ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ…

2 hours ago