ಮೈಸೂರು : ನಗರದಲ್ಲಿ ಮತ್ತೊಂದು ಕೊಲೆ ಪ್ರಕರಣ ವರದಿಯಾಗಿದೆ. ಚಿಂದಿ ಆಯುವ ಯುವಕರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ನಡೆದ ಅಲ್ಪ ಸಮಯದಲ್ಲಿಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಮೂಲದ ಶಶಿಕುಮಾರ್ ಅಲಿಯಾಸ್ ಕೆಂಚ ಎಂಬಾತನೇ ಕೊಲೆಗೀಡಾದವನು. ಆತನ ಸ್ನೇಹಿತರಾದ ನರಸಿಂಹ, ಸೀನ ಹಾಗೂ ಪ್ರಭು ಎಂಬವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಭಾನುವಾರ ರಾತ್ರಿ ನಗರದ ಚಾಮರಾಜ ಜೋಡಿ ರಸ್ತೆಯ ಗಾಯತ್ರಿ ಚಿತ್ರಮಂದಿರದ ಮುಂಭಾಗ ಈ ಘಟನೆ ನಡೆದಿದೆ. ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದ ನಾಲ್ವರೂ ಕೂಡ ಸ್ನೇಹಿತರಾಗಿದ್ದು, ಮಾದಕ ವಸ್ತು ಸೇವನೆಯ ಚಟಕ್ಕೆ ದಾಸರಾಗಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.
ಭಾಣುವಾರ ರಾತ್ರಿ ನಶೆಯಲ್ಲಿ ಇದ್ದ ಶಶಿಕುಮಾರ್ ಹಾಗೂ ನರಸಿಂಹನ ನಡುವೆ ಮಾತಿನ ಚಕಮಕಿ ನಡೆದು, ಕೈಕೈ ಮಿಲಾಯಿಸುವ ಹಂತ ತಲುಪಿದೆ. ಈ ವೇಳೆ ನರಸಿಂಹ ಹಾಗೂ ಇತರ ಇಬ್ಬರೂ ಸೇರಿ ಕಲ್ಲು ಹಾಗೂ ಕಬ್ಬಿಣದ ರಾಡ್‌ನಿಂದ ಶಶಿಕುಮಾರ್ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ.
ಇದನ್ನೂ ಓದಿ:-ಡಿ.13,14 ರಂದು ಬನವಾಸಿ ತೋಟದಲ್ಲಿ ಅರಿವಿನ ಚಾವಡಿ ಕಾರ್ಯಕ್ರಮ
ಸೋಮವಾರ ಬೆಳಿಗ್ಗೆ ದಾರಿಹೋಕರು ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಕೃಷ್ಣರಾಜ ಠಾಣೆ ಪೊಲೀಸರು, ಶವವನ್ನು ಕೆಆರ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಶವದ ಪಕ್ಕದಲ್ಲಿಯೇ ಮಲಗಿದ್ದ: ಶಶಿಕುಮಾರ್ ಮೇಲೆ ಹಲ್ಲೆ ನಡೆಸಿದ ಮೂವರಲ್ಲಿ ನರಸಿಂಹ ಎಂಬಾತ ನಶೆಯ ಕಾರಣದಿಂದ ಶವದ ಪಕ್ಕದಲ್ಲಿಯೇ ಮಲಗಿದ್ದ. ತಕ್ಷಣವೇ ಆತನನ್ನು ವಶಕ್ಕೆ ಪಡೆದ ಪೊಲೀಸರು ಉಳಿದವರನ್ನೂ ಬಂಧಿಸಿದ್ದಾರೆ.
ಕೊಲೆ ಆರೋಪಿಗಳು: ಮೃತ ಶಶಿಕುಮಾರ್ ಹಾಗೂ ನರಸಿಂಹ ಅವರುಗಳು ಈ ಹಿಂದೆ ಕಾಡಾ ಕಚೇರಿ ಆವರಣದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು. ಶಿಕ್ಷೆ ಅನುಭವಿಸಿದ ನಂತೆ ಕಳೆದ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಿದ್ದರು ಎಂದು ತಿಳಿದುಬಂದಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…