ಮೈಸೂರು ನಗರ

ಚಾಕು ಸಿಕ್ಕಿದೆ, ಚಾಕು ಹಿಂದೆ ಇರುವ ಕೈ ಬಂಧಿಸಬೇಕು: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಾ.ರಾ.ಮಹೇಶ್‌ ಪ್ರತಿಕ್ರಿಯೆ ನೀಡಿದ್ದಾರೆ.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಆರೋಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದಾರೆ.

ಇನ್ನು 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಯಲ್ಲಿರುವ ಚಿನ್ನಯ್ಯನನ್ನು ಎಲ್ಲಾ ಆಯಾಮಗಳಲ್ಲೂ ವಿಚಾರಣೆ ನಡೆಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಬಂಧನ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಸಾ.ರಾ.ಮಹೇಶ್‌ ಅವರು, ಚಾಕು ಸಿಕ್ಕಿದೆ. ಚಾಕು ಹಿಂದೆ ಇರುವ ಕೈ ಬಂಧಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಬಂಧನದಿಂದ ಎಲ್ಲಾ ಮುಗಿದಿಲ್ಲ. ಮಾಸ್ಕ್ ಮ್ಯಾನ್ ಇಲ್ಲಿ ಕೇವಲ ನೆಪ ಮಾತ್ರ. ಚಾಕು ಸಿಕ್ಕಿದೆ. ಈಗ ಚಾಕು ಹಿಂದೆ ಇರುವ ಕೈಯನ್ನು ಬಂಧಿಸಬೇಕು. ಈ ಪ್ರಕರಣದಲ್ಲಿ ಷಡ್ಯಂತ್ರ ಮಾಡಿದವರ ಬಂಧನ ಆಗಬೇಕು ಎಂದು ಆಗ್ರಹಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾಳೆ ನೂರಾರು ಕಾರುಗಳಲ್ಲಿ ಧರ್ಮಸ್ಥಳಕ್ಕೆ ಜೆಡಿಎಸ್‌ನಿಂದ ರ್ಯಾಲಿ ಮಾಡಲಾಗುತ್ತದೆ. ಕಾರುಗಳಲ್ಲಿ ತೆರಳಿ ಮಂಜುನಾಥನ ದರ್ಶನ ಪಡೆಯುತ್ತೇವೆ. ಸಿಎಂ ಸಿದ್ದರಾಮಯ್ಯರ ಈ ಅವಧಿಯಲ್ಲಿ ಒಳ್ಳೆಯದಕ್ಕಿಂತಾ ಜನರಿಗೆ ಹೊರೆ ಹೆಚ್ಚಾಗುವ ಕೆಲಸ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಆಂದೋಲನ ವಿಶೇಷ ; ಸೋನಂ ವಾಂಗ್ಚುಕ್ ದಿಢೀರ್ ಬಿಡುಗಡೆ ‌

• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…

19 mins ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ

ಮಹಾದೇಶ್‌ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…

39 mins ago

ಮತ್ತೆ ಚಿಗುರೊಡೆದ ಎಂಡಿಎ ಹೊಸ ಬಡಾವಣೆಯ ಕನಸು

ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…

55 mins ago

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

11 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

12 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

12 hours ago