ಮೈಸೂರು ನಗರ

ಒಂದು ಫೋಟೋ ಸಾವಿರ ಪದಗಳಿಗೆ ಸಮ: ಸಿಎಂ ಸಿದ್ದರಾಮಯ್ಯ

ಮೈಸೂರು: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಯ್ಕೆ ಆದ ಫೋಟೋ ಜರ್ನಲಿಸ್ಟ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ವಿತರಿಸಿ ಮಾತನಾಡಿದರು.

ಒಂದು ಫೋಟೋ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್‌ಗಳು ಪತ್ರಿಕಾ ವೃತ್ತಿಯ ಮುಖ್ಯ ಭಾಗ. ಆದರೆ ತೆಗೆದ ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು ಆರೋಗ್ಯಕರವಲ್ಲ ಎಂದರು.

ಪತ್ರಕರ್ತರು ಸತ್ಯ ಹೇಳ್ತಾರೆ ಎನ್ನುವ ನಂಬಿಕೆಯಿಂದ ನಿಮ್ಮನ್ನು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಬ ಎಂದು ಕರೆಯುತ್ತಾರೆ. ಪತ್ರಕರ್ತರು ಸುಳ್ಳು ಹೇಳುವುದಿಲ್ಲ ಎನ್ನುವ ನಂಬಿಕೆ ಈಗಲೂ ಇದೆ. ಆದರೆ, ಊಹಾ ಪತ್ರಿಕೋದ್ಯಮ ವಿಪರೀತ ಆಗುತ್ತಿದೆ. ಊಹೆ ಮಾಡಿಕೊಂಡು ಸುದ್ದಿ ಮಾಡುವುದು ಗೌರವ ತರುವುದಿಲ್ಲ ಎಂದರು.

ಇದನ್ನು ಓದಿ: ಇದು ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ: ಸರ್ಕಾರದ ವಿರುದ್ಧ ಆರ್.‌ಅಶೋಕ್‌ ಆಕ್ರೋಶ

ಸಾಮಾಜಿಕ ವ್ಯವಸ್ಥೆಯನ್ನು ಜನರ ಮುಂದೆ ವಾಸ್ತವವಾಗಿ ಇಡುವ ಕೆಲಸ ಮಾಡುತ್ತಲೇ ಇಲ್ಲ ನೀವು. ನೂರಾರು ವರ್ಷಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಟ್ಟಿದ್ದ ಕಾರಣಕ್ಕೆ ಅಸಮಾನತೆ ಬೆಳೆದಿದೆ. ಇದನ್ನೆಲ್ಲಾ ಜನರಿಗೆ ಅರ್ಥ ಮಾಡಿಸಬೇಕಿದೆ ಎಂದರು.

ಪತ್ರಕರ್ತರು ಮೌಡ್ಯವನ್ನು ಬೆಂಬಲಿಸಬಾರದು. ಬಸವಣ್ಣನವರು 12ನೇ ಶತಮಾನದಲ್ಲೇ ಮೌಡ್ಯದ ವಿರುದ್ಧ ಚಳವಳಿ ನಡೆಸಿದರು. ಆದರೆ ಇವತ್ತಿನ ಪತ್ರಕರ್ತರು ಮೌಡ್ಯದ ವಿರುದ್ಧ ಜನರನ್ನು ಎಚ್ಚರಿಸುವ ಕೆಲಸವನ್ನೇ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಅನುಕೂಲ ಎನ್ನುವುದನ್ನು ಯೋಚಿಸಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಿಎಂ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಶಾಸಕ ಹರೀಶ್ ಗೌಡ, ವಿಧಾನ‌ ಪರಿಷತ್ ಸದಸ್ಯ ಶಿವಕುಮಾರ್, ಅಸೋಸಿಯೇಷನ್ ಅಧ್ಯಕ್ಷರಾದ ಪ್ರಗತಿ ಗೋಪಾಲಕೃಷ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

12 mins ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

26 mins ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

36 mins ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

53 mins ago

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್‌ ಅರೆಸ್ಟ್‌ ಪ್ರಕರಣ: ಎಚ್ಚೆತ್ತುಕೊಳ್ಳದ ಜನತೆ

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…

1 hour ago

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

2 hours ago