ಮೈಸೂರು: ಚಾಮುಂಡಿಬೆಟ್ಟದ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಧರೆಗುರುಳಿರುವ ಘಟನೆ ನಡೆದಿದೆ.
ಅದೃಷ್ಟವಶಾತ್ ಘಟನೆ ನಡೆಯುವ ವೇಳೆ ಯಾರು ಇಲ್ಲದ ಪರಿಣಾಮ ಮುಂದೆ ಆಗಬಹುದಾದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ವಿದ್ಯುತ್ ಕಂಬ ಉರುಳಿದ ಪರಿಣಾಮ ರಸ್ತೆ ಸಂಚಾರ ಕೆಲ ಕಾಲ ಬಂದ್ ಆಗಿತ್ತು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸೆಸ್ಕ್ ಸಿಬ್ಬಂದಿ ರಸ್ತೆಗೆ ಬಿದ್ದಿದ್ದ ಕಂಬವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.





