Mysore
20
light rain

Social Media

ಬುಧವಾರ, 25 ನವೆಂಬರ್ 2026
Light
Dark

ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಧರೆಗುರುಳಿದ ಲೈಟ್ ಕಂಬ: ತಪ್ಪಿದ ಭಾರೀ ಅನಾಹುತ

ಮೈಸೂರು: ಚಾಮುಂಡಿಬೆಟ್ಟದ ರಸ್ತೆಯಲ್ಲಿ ವಿದ್ಯುತ್‌ ಕಂಬವೊಂದು ಧರೆಗುರುಳಿರುವ ಘಟನೆ ನಡೆದಿದೆ.

ಅದೃಷ್ಟವಶಾತ್‌ ಘಟನೆ ನಡೆಯುವ ವೇಳೆ ಯಾರು ಇಲ್ಲದ ಪರಿಣಾಮ ಮುಂದೆ ಆಗಬಹುದಾದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ವಿದ್ಯುತ್‌ ಕಂಬ ಉರುಳಿದ ಪರಿಣಾಮ ರಸ್ತೆ ಸಂಚಾರ ಕೆಲ ಕಾಲ ಬಂದ್‌ ಆಗಿತ್ತು.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸೆಸ್ಕ್‌ ಸಿಬ್ಬಂದಿ ರಸ್ತೆಗೆ ಬಿದ್ದಿದ್ದ ಕಂಬವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

 

Tags:
error: Content is protected !!