ಮೈಸೂರು ನಗರ

ಮೈಸೂರಿನಲ್ಲಿ ಹೆಚ್ಚಾಗುತ್ತಿರುವ ವಾಹನ ದಟ್ಟಣೆ: 5 ವರ್ಷದಲ್ಲಿ ಅಪಘಾತಕ್ಕೆ ಬಲಿಯಾದವರೆಷ್ಟು ಗೊತ್ತಾ?

ಮೈಸೂರು: ಮೈಸೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಪರಿಣಾಮ ಕಳೆದ 5 ವರ್ಷಗಳ ಅವಧಿಯಲ್ಲಿ ಅಪಘಾತಕ್ಕೆ 801 ಮಂದಿ ಬಲಿಯಾಗಿದ್ದಾರೆ.

ನಗರ ವ್ಯಾಪ್ತಿಯಲ್ಲಿ ಒಟ್ಟು 4508 ಅಪಘಾತ ಪ್ರಕರಣಗಳು ದಾಖಲಾಗಿದ್ದು, ಅಪಘಾತದಲ್ಲಿ ಒಟ್ಟು 4606 ಮಂದಿಗೆ ಗಂಭೀರ ಗಾಯಗಳಾಗಿದೆ.

ವಾಹನ ಸಂಚಾರರ ನಿರ್ಲಕ್ಷ್ಯವೇ ಅಪಘಾತಕ್ಕೆ ಪ್ರಮುಖ ಕಾರಣ ಎಂಬುದು ಪೊಲೀಸರು ಅಭಿಪ್ರಾಯಪಟ್ಟಿದ್ದು, ಗುಂಡಿ ಬಿದ್ದ ರಸ್ತೆ, ಅವೈಜ್ಞಾನಿಕ ಹಂಪ್ಸ್‌ಗಳೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ.

ಮೈಸೂರು ನಗರದಲ್ಲಿ ವಿ.ವಿ.ಪುರಂ, ಕೃಷ್ಣರಾಜ, ಸಿದ್ದಾರ್ಥನಗರ, ನರಸಿಂಹರಾಜ, ಕುವೆಂಪುನಗರ, ದೇವರಾಜ ಸಂಚಾರಿ ಠಾಣೆಗಳಿದ್ದು, ದೇವರಾಜ ಹೊರತುಪಡಿಸಿ ಉಳಿದ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ಬ್ಲಾಕ್ ಸ್ಪಾಟ್‌ಗಳಿವೆ. ಇದೇ ಅಪಘಾತಕ್ಕೆ ಆಹ್ವಾನ ನೀಡುವಂತಿದೆ ಎಂದು ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬ್ಲಾಕ್ ಸ್ಪಾಟ್ ಇರುವ ಕಡೆ ನಾಮಫಲಕ ಹಾಕಿ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ.

ಇನ್ನು ಕಳೆದ 2020ರಲ್ಲಿ 633 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 623 ಮಂದಿಗೆ ಗಾಯಗಳಾಗಿದ್ದು, 122 ಮಂದಿ ಸಾವನ್ನಪ್ಪಿದ್ದಾರೆ. 2021ರಲ್ಲಿ 651 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 672 ಮಂದಿಗೆ ಗಾಯಗಳಾಗಿದ್ದು, 121 ಮಂದಿ ಸಾವನ್ನಪ್ಪಿದ್ದಾರೆ. 2022ರಲ್ಲಿ 776 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 775 ಮಂದಿಗೆ ಗಾಯಗಳಾಗಿದ್ದು, 168 ಮಂದಿ ಸಾವನ್ನಪ್ಪಿದ್ದಾರೆ. 2023ರಲ್ಲಿ 953 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 992 ಮಂದಿಗೆ ಗಾಯಗಳಾಗಿದ್ದು, 168 ಮಂದಿ ಸಾವನ್ನಪ್ಪಿದ್ದಾರೆ. 2024ರಲ್ಲಿ 1021 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 1041 ಮಂದಿಗೆ ಗಾಯಗಳಾಗಿದ್ದು, 148 ಮಂದಿ ಸಾವನ್ನಪ್ಪಿದ್ದಾರೆ.

ಇನ್ನು 2025ರ ಜನವರಿಯಿಂದ ಜೂನ್ ತನಕ 474 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 503 ಮಂದಿಗೆ ಗಾಯಗಳಾಗಿದ್ದು, 71 ಮಂದಿ ಸಾವನ್ನಪ್ಪಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

3 mins ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

46 mins ago

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

5 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

5 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

5 hours ago