accident (1)
ಮೈಸೂರು: ಮೈಸೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಪರಿಣಾಮ ಕಳೆದ 5 ವರ್ಷಗಳ ಅವಧಿಯಲ್ಲಿ ಅಪಘಾತಕ್ಕೆ 801 ಮಂದಿ ಬಲಿಯಾಗಿದ್ದಾರೆ.
ನಗರ ವ್ಯಾಪ್ತಿಯಲ್ಲಿ ಒಟ್ಟು 4508 ಅಪಘಾತ ಪ್ರಕರಣಗಳು ದಾಖಲಾಗಿದ್ದು, ಅಪಘಾತದಲ್ಲಿ ಒಟ್ಟು 4606 ಮಂದಿಗೆ ಗಂಭೀರ ಗಾಯಗಳಾಗಿದೆ.
ವಾಹನ ಸಂಚಾರರ ನಿರ್ಲಕ್ಷ್ಯವೇ ಅಪಘಾತಕ್ಕೆ ಪ್ರಮುಖ ಕಾರಣ ಎಂಬುದು ಪೊಲೀಸರು ಅಭಿಪ್ರಾಯಪಟ್ಟಿದ್ದು, ಗುಂಡಿ ಬಿದ್ದ ರಸ್ತೆ, ಅವೈಜ್ಞಾನಿಕ ಹಂಪ್ಸ್‌ಗಳೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ.
ಮೈಸೂರು ನಗರದಲ್ಲಿ ವಿ.ವಿ.ಪುರಂ, ಕೃಷ್ಣರಾಜ, ಸಿದ್ದಾರ್ಥನಗರ, ನರಸಿಂಹರಾಜ, ಕುವೆಂಪುನಗರ, ದೇವರಾಜ ಸಂಚಾರಿ ಠಾಣೆಗಳಿದ್ದು, ದೇವರಾಜ ಹೊರತುಪಡಿಸಿ ಉಳಿದ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ಬ್ಲಾಕ್ ಸ್ಪಾಟ್‌ಗಳಿವೆ. ಇದೇ ಅಪಘಾತಕ್ಕೆ ಆಹ್ವಾನ ನೀಡುವಂತಿದೆ ಎಂದು ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬ್ಲಾಕ್ ಸ್ಪಾಟ್ ಇರುವ ಕಡೆ ನಾಮಫಲಕ ಹಾಕಿ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ.
ಇನ್ನು ಕಳೆದ 2020ರಲ್ಲಿ 633 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 623 ಮಂದಿಗೆ ಗಾಯಗಳಾಗಿದ್ದು, 122 ಮಂದಿ ಸಾವನ್ನಪ್ಪಿದ್ದಾರೆ. 2021ರಲ್ಲಿ 651 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 672 ಮಂದಿಗೆ ಗಾಯಗಳಾಗಿದ್ದು, 121 ಮಂದಿ ಸಾವನ್ನಪ್ಪಿದ್ದಾರೆ. 2022ರಲ್ಲಿ 776 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 775 ಮಂದಿಗೆ ಗಾಯಗಳಾಗಿದ್ದು, 168 ಮಂದಿ ಸಾವನ್ನಪ್ಪಿದ್ದಾರೆ. 2023ರಲ್ಲಿ 953 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 992 ಮಂದಿಗೆ ಗಾಯಗಳಾಗಿದ್ದು, 168 ಮಂದಿ ಸಾವನ್ನಪ್ಪಿದ್ದಾರೆ. 2024ರಲ್ಲಿ 1021 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 1041 ಮಂದಿಗೆ ಗಾಯಗಳಾಗಿದ್ದು, 148 ಮಂದಿ ಸಾವನ್ನಪ್ಪಿದ್ದಾರೆ.
ಇನ್ನು 2025ರ ಜನವರಿಯಿಂದ ಜೂನ್ ತನಕ 474 ಅಪಘಾತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 503 ಮಂದಿಗೆ ಗಾಯಗಳಾಗಿದ್ದು, 71 ಮಂದಿ ಸಾವನ್ನಪ್ಪಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…