ಮೈಸೂರು ನಗರ

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ ಸರ್ಕಾರಿ ಶಾಲಾ-ಕಾಲೇಜುಗಳ ಜಾಗದ ಸುತ್ತಲೂ ಕಾಂಪೌಂಡ್ ಹಾಕಿಸಿ ಸಂರಕ್ಷಣೆ ಮಾಡಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.

ಮೈಸೂರು ತಾಲ್ಲೂಕಿನ ಮಂಡಕಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಲಯನ್ಸ್ ಸಂಸ್ಥೆಯವರು ಕಟ್ಟಿಸಿಕೊಡುತ್ತಿರುವ ಶೌಚಾಲಯ, ಕಾಂಪೌಂಡ್,ಕುಡಿಯುವ ನೀರಿನ ಘಟಕದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಶಾಲೆಗಳ ಸುತ್ತಮುತ್ತಲ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ ಮಾಡಿಸಬೇಕು. ಅದಕ್ಕೆ ತಕ್ಕಂತೆ ಸ್ಕೆಚ್, ಖಾತೆ ಮಾಡಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಜಂಟಿಯಾಗಿ ಸೇರಿ ಆಯಾಯ ಶಾಲೆಗಳ ಮುಖ್ಯೋಪಾಧ್ಯಾಯರೊಂದಿಗೆ ಕುಳಿತು ಬೇಗನೆ ಕೆಲಸ ಮುಗಿಸಬೇಕು ಎಂದು ಹೇಳಿದರು.

ಬಡವರು, ಶ್ರೀಮಂತರ ಮಕ್ಕಳು ಎಂಬುದನ್ನು ನೋಡದೆ ಎಲ್ಲರನ್ನೂ ಸಮಾನವಾಗಿ ಕಾಣುವ ಶಿಕ್ಷಕರು ಜ್ಞಾನಿಗಳು, ಸಮಾಜದ ಆಗು-ಹೋಗುಗಳು ಸೇರಿದಂತೆ ಎಲ್ಲವನ್ನು ತಿಳಿದುಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟರು. ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿದ್ದಾಗ ಸಿಕ್ಕ ಅವಧಿಯಲ್ಲಿ ಸರ್ಕಾರಿ ಪದವಿ ಪೂರ್ವ,ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಗಮನಹರಿಸಿದ್ದೆ. ೩೯೩ ಪ್ರಾಂಶುಪಾಲರನ್ನು ನೇಮಕ ಮಾಡುವ ಜತೆಗೆ ಕಟ್ಟಡ, ಶೌಚಾಲಯ, ಗ್ರಂಥಾಲಯ,ಆಡಿಟೋರಿಯಂಗಳನ್ನು ನಿರ್ಮಾಣ ಮಾಡಿದ್ದೇವು. ರಾಜ್ಯದ ಬಹುತೇಕ ಕಾಲೇಜುಗಳು ಸುಸಜ್ಜಿತ ಕಟ್ಟಡಗಳನ್ನು ಹೊಂದುವಂತೆ ಮಾಡಿದ್ದೇನೆ ಎಂದರು.

ಗ್ರಾಮಸ್ಥರು ನಮ್ಮೂರಿನ ಶಾಲೆಗಳ ಅಭಿವೃದ್ಧಿ ಬಗ್ಗೆ ಯೋಚಿಸಬೇಕು. ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಡಬೇಕು. ಜಿಪಂ ಸದಸ್ಯರಾಗಿ ಆಯ್ಕೆಯಾದ ದಿನದಿಂದ ಇಲ್ಲಿಯವರೆಗೂ ಶಿಕ್ಷಣಕ್ಕೆ ಒತ್ತು ನೀಡುತ್ತಾ ಬಂದಿದ್ದೇನೆ. ಯಾವುದೇ ಊರಾಗಲೀ,ಯಾವುದೇ ವಿಚಾರವಾಗಲೀ ನಾನು ರಾಜಕೀಯ ಮಾಡಲ್ಲ. ಶಿಕ್ಷಣಕ್ಕೆ ಸಂಬಂಧಿಸಿದಂತೆ ಬೇರೆಯವರು ರಾಜಕಾರಣ ಮಾಡುತ್ತಾರೆ. ಆದರೆ,ನಾನು ಅದಕ್ಕೆ ತಲೆಹಾಕಲ್ಲ ಎಂದು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಬರೀ ಬಡವರ ಮಕ್ಕಳು ಮಾತ್ರ ಓದುತ್ತಾರೆ. ಹಣವುಳ್ಳವರು ದೊಡ್ಡ ದೊಡ್ಡ ಕಾನ್ವೆಂಟ್‌ಗಳಲ್ಲಿ ಓದಿಸುತ್ತಾರೆ.ಶಿಕ್ಷಕರು ಮಕ್ಕಳನ್ನು ಮತ್ತು ಶಾಲೆಯನ್ನು ತಮ್ಮ ಮಕ್ಕಳೆಂದು ಕಾಣಬೇಕು. ಮುಖ್ಯೋಪಾಧ್ಯಾಯರು ತಾಯಿಯ ಸಮಾನದಲ್ಲಿ ನಿಂತು ಸಹ ಶಿಕ್ಷಕರನ್ನು ಮಕ್ಕಳಂತೆ ಕಂಡುಒಟ್ಟಿಗೆ ಹೋಗಬೇಕು. ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲೆ ನಿಂತಿರುವುದನ್ನು ನಾವು ಗಮನಿಸಬೇಕಾಗಿದೆ ಎಂದರು.

ಜನರ ಸೇವೆ ಮಾಡಲು ನನಗೊಂದು ಅವಕಾಶ ನೀಡಿರುವಂತೆ ಮಕ್ಕಳ ಸೇವೆ ಮಾಡಲು ನಿಮಗೆ ಅವಕಾಶ ಸಿಕ್ಕಿದೆ. ದೈವ ಪೂಜೆ ಎನ್ನುವಂತೆ ಮಕ್ಕಳನ್ನು ನೋಡಿಕೊಳ್ಳಬೇಕು. ಕ್ಷೇತ್ರದಲ್ಲಿರುವ ಶಾಲೆಗಳ ಅಭಿವೃದ್ಧಿಗೆ ಮೊದಲಿನಿಂದಲೂ ಗಮನಹರಿಸುತ್ತಾ ಬಂದಿದ್ದೇನೆ. ಮಕ್ಕಳ ಕ್ರೀಡಾಂಗಣ,ಆಟದ ಮೈದಾನ,ಶೌಚಾಲಯಗಳು,ಕುಡಿಯುವ ನೀರಿನ ಘಟಕವನ್ನು ಒದಗಿಸಲಾಗುತ್ತಿದೆ. ಈಗ ಶಾಲೆಗಳ ಜಾಗವನ್ನು ರಕ್ಷಣೆ ಮಾಡುವ ಕಡೆಗೆ ಗಮನಹರಿಸಲಾಗಿದೆ ಎಂದು ಭರವಸೆ ನೀಡಿದರು.

ಲಯನ್ ಸಂಸ್ಥೆಯವರು ಸ್ವಯಂಪ್ರೇರಣೆಯಿಂದ ಮಂಡಕಳ್ಳಿ ಶಾಲೆಯನ್ನು ಅಭಿವೃದ್ಧಿಪಡಿಸಲು ಮುಂದಾಗಿ ಆಯ್ಕೆ ಮಾಡಿಕೊಂಡಿರುವುದು ಸಂತೋಷದ ವಿಚಾರವಾಗಿದೆ. ಕಾಂಪೌಂಡ್,ಕುಡಿಯುವ ನೀರಿನ ಘಟಕ, ಶೌಚಾಲಯದ ಕಟ್ಟಡದ ಜತೆಗೆ ಮಕ್ಕಳ ಆಟೋಟಕ್ಕೆ ಬೇಕಾದ ಉಪಕರಣಗಳನ್ನು ಒದಗಿಸುತ್ತಿರುವುದರಿಂದ ಮಕ್ಕಳಿಗೂ ಅನುಕೂಲವಾಗಲಿದೆ. ಶಿಕ್ಷಕರು ಮರಗಿಡಗಳನ್ನು ನೆಟ್ಟು ಸುಂದರ ವಾತಾವರಣ ನಿರ್ಮಾಣ ಮಾಡಬೇಕು ಎಂದು ಸಲಹೆ ನೀಡಿದರು.

ಗ್ರಾಮದ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯನ್ನಾಗಿ ಮೇಲ್ದರ್ಜೇಗೇರಿಸಲು ಬೇಕಾದ ಕ್ರಮವನ್ನು ಕೈಗೊಳ್ಳಲಾಗುವುದು. ಶಾಲೆಯು ಮಾದರಿಯಾಗಿ ರೂಪುಗೊಂಡರೆ ಆಯ್ಕೆ ಮಾಡಬಹುದು ಎಂದರು. ಡಿಡಿಪಿಐ ಜವರೇಗೌಡ, ಮುಖಂಡರಾದ ಲೋಕೇಶ್, ಬೀರೇಗೌಡ,ರಾಮೇಗೌಡ,ಚಂದ್ರಶೇಖರ್, ಲಯನ್ಸ್ ಸಂಸ್ಥೆಯ ಮಮತಾ, ಸುಬ್ರಹ್ಮಣ್ಯ, ಮೂರ್ತಿ,ಜಯಕುಮಾರ್,ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

ಮೈಸೂರು ತಾಲ್ಲೂಕಿನ ಮಂಡಕಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಲಯನ್ಸ್ ಸಂಸ್ಥೆಯವರು ಕಟ್ಟಿಸಿಕೊಡುತ್ತಿರುವ ಶೌಚಾಲಯ,ಕಾಂಪೌಂಡ್,ಕುಡಿಯುವ ನೀರಿನ ಘಟಕದ ನಿರ್ಮಾಣಕ್ಕೆ ಶಾಸಕ ಜಿ.ಟಿ.ದೇವೇಗೌಡ ಶಂಕುಸ್ಥಾಪನೆ ನೆರವೇರಿಸಿದರು.ಡಿಡಿಪಿಐ ಜವರೇಗೌಡ, ಮುಖಂಡರಾದ ಲೋಕೇಶ್, ಬೀರೇಗೌಡ,ರಾಮೇಗೌಡ,ಚಂದ್ರಶೇಖರ್, ಲಯನ್ಸ್ ಸಂಸ್ಥೆಯ ಮಮತಾ, ಸುಬ್ರಹ್ಮಣ್ಯ, ಮೂರ್ತಿ,ಜಯಕುಮಾರ್,ಶ್ರೀನಿವಾಸ್ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

4 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

4 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

5 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

5 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

6 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

7 hours ago