ಮೈಸೂರು ನಗರ

ಪ್ರತಾಪ್‌ ಸಿಂಹ ವಿರುದ್ಧ ಕಾರ್ಯಕರ್ತರು ದೂರು ನೀಡಿರುವ ವಿಚಾರ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಪಕ್ಷದ ತತ್ವ ಸಿದ್ಧಾಂತದ ಪ್ರಕಾರ ನಡೆದುಕೊಳ್ಳಲಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಲಹೆ ನೀಡಿದ್ದಾರೆ.

ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಬಿಜೆಪಿ ಕಾರ್ಯಕರ್ತರು ಬಿ.ವೈ.ವಿಜಯೇಂದ್ರ ಅವರಿಗೆ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಪ್ರತಿಕ್ರಿಯೆ ನೀಡಿರುವ ಸಂಸದ ಯದುವೀರ್‌ ಒಡೆಯರ್‌ ಅವರು, ಪ್ರತಾಪ್‌ ಸಿಂಹ ಅವರ ಇತ್ತೀಚಿನ ನಡೆಗೆ ಬೇಸರ ವ್ಯಕ್ತವಾಗಿದೆ. ಕಳೆದ ಮೂರು ನಾಲ್ಕು ತಿಂಗಳಿನಿಂದ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ. ಸಹಜವಾಗಿಯೇ ಕಾರ್ಯಕರ್ತರಿಗೆ ಅದು ಬೇಸರ ತರಿಸಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರು ವರಿಷ್ಠರಿಗೆ ದೂರು ನೀಡಿದ್ದಾರೆ. ಈ ಕುರಿತು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ಕ್ರಮ ಕೈಗೊಳ್ಳುತ್ತಾರೆ. ಪ್ರತಾಪ್‌ ಸಿಂಹ ಅವರು ಭಿನ್ನಾಭಿಪ್ರಾಯಗಳನ್ನು ದೂರ ಇರಿಸಲಿ. ಪಕ್ಷಕ್ಕೆ ಧಕ್ಕೆ ಬರದ ರೀತಿ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿ. ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಸಣ್ಣ ಪುಟ್ಟ ಸಮಸ್ಯೆ ಇದ್ದರೆ ಅದನ್ನು ಎಲ್ಲಾ ಕೂತು ಮಾತನಾಡಿ ಬಗೆಹರಿಸುತ್ತಾರೆ ಎಂದು ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ..!

ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…

3 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಅಲೆಮಾರಿ ಮಕ್ಕಳ ಶಿಕ್ಷಣ ಸಂಗಾತಿ ʻಲರ್ನಿಂಗ್ ಕಂಪ್ಯಾನಿಯನ್ಸ್’ ‌

ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…

49 mins ago

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…

1 hour ago

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

3 hours ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

3 hours ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

4 hours ago