ಮೈಸೂರು: ಬೆಂಗಳೂರಿನ ಕೋರ್ಟ್ ನೀಡಿದ ಅನುಮತಿಯಿಂದಾಗಿ ಈ ಬಾರಿಯೂ ಕೂಡ ನಟ ದರ್ಶನ್ ಮಕರ ಸಂಕ್ರಾಂತಿ ಹಬ್ಬವನ್ನು ಮೈಸೂರಿನಲ್ಲೇ ಆಚರಣೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರತಿ ವರ್ಷವೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕುಟುಂಬ ಸದಸ್ಯರು ಹಾಗೂ ಆಪ್ತರ ಜೊತೆ ಮೈಸೂರಿನ ಫಾರ್ಮ್‌ಹೌಸ್‌ನಲ್ಲೇ ಸಂಕ್ರಾಂತಿ ಹಬ್ಬ ಆಚರಣೆ ಮಾಡುತ್ತಿದ್ದರು.
ಫಾರ್ಮ್‌ಹೌಸ್‌ನಲ್ಲಿ ಹಬ್ಬದ ಪ್ರಯುಕ್ತ ಹಸುಗಳಿಗೆ ಸ್ನಾನ ಮಾಡಿಸಿ, ಸಿಂಗರಿಸಿ ಕಿಚ್ಚು ಹಾಯಿಸಿ, ಸಡಗರದಿಂದಲೇ ಸಂಕ್ರಾಂತಿ ಹಬ್ಬವನ್ನು ಬರಮಾಡಿಕೊಳ್ಳುತ್ತಿದ್ದರು. ಅದರಂತೆ ಈ ವರ್ಷವೂ ಕೂಡ ಹಬ್ಬ ಆಚರಿಸಲು ನಟ ದರ್ಶನ್ ಮನೆಯಲ್ಲಿ ಭರ್ಜರಿ ತಯಾರಿ ನಡೆದಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಆರೋಪಿಯಾಗಿದ್ದರಿಂದ ಮತ್ತು ಬೆಂಗಳೂರು ಬಿಟ್ಟು ತೆರಳಬಾರದು ಎಂದು ಕೋರ್ಟ್ ಆದೇಶ ಇರುವುದರಿಂದ ಈ ಬಾರಿ ಸಂಕ್ರಾಂತಿ ಹಬ್ಬವನ್ನು ಎಲ್ಲಿ ಆಚರಿಸುತ್ತಾರೆ ಎಂಬ ಕುತೂಹಲ ಇತ್ತು.
ಆದರೆ ಈಗ ಈ ಎಲ್ಲಾ ಕುತೂಹಲಗಳಿಗೆ ತೆರೆ ಬಿದ್ದಿದ್ದು, ಬೆಂಗಳೂರು ಕೋರ್ಟ್ ಜನವರಿ.12ರಿಂದ 17ರವರೆಗೆ ಮೈಸೂರಿನಲ್ಲಿ ಇರಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಟ ದರ್ಶನ್ ಸಂಕ್ರಾಂತಿ ಹಬ್ಬ ಆಚರಣೆ ಮಾಡಲಿದ್ದಾರೆ.
ಈ ಬಾರಿಯೂ ಹಸು, ಕುದುರೆ ಕುರಿ ಹಾಗೂ ಮತ್ತಿತರ ಪ್ರಾಣಿಗಳನ್ನು ಸಿಂಗರಿಸಿ ಕುಟುಂಬದೊಡನೆ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಆಚರಣೆ ಮಾಡಲಿದ್ದಾರೆ.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…