ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿ ತಾಯಿಯ ಆಶೀರ್ವಾದ ದರ್ಶನ ಪಡೆದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ತಿಂಗಳಿಗೂ ಹೆಚ್ಚು ದಿನಗಳ ಕಾಲ ಜೈಲು ವಾಸ ಅನುಭವಿಸಿದ್ದ ನಟ ದರ್ಶನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಬಳಿಕ ದರ್ಶನ್ ಮೈಸೂರಿಗೆ ಹೋಗಲು ಕೂಡ ಹೈಕೋರ್ಟ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು, ಮೈಸೂರಿನಲ್ಲಿ ಕುಟುಂಬ ಸದಸ್ಯರೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿ ಸಂಭ್ರಮಿಸಿದರು.
ಸಂಕ್ರಾಂತಿ ಮುಗಿದ ಹಿನ್ನೆಲೆಯಲ್ಲಿ ನಟ ದರ್ಶನ್ ಮೈಸೂರಿನ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು, ಸುಸೂತ್ರವಾಗಿ ಆಪರೇಷನ್ ಆಗಲಿ ಎಂದು ದೇವರ ಮೊರೆ ಹೋಗುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿಂದು ಪತ್ನಿ ವಿಜಯಲಕ್ಷ್ಮೀ ಹಾಗೂ ಬೆಂಬಲಿಗರೊಂದಿಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.