Mysore
31
clear sky

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಮೈಸೂರಿನ ಮಣಿಪಾಲ್‌ ಆಸ್ಪತ್ರೆಗೆ ಆಗಮಿಸಿದ ನಟ ದರ್ಶನ್‌

ಮೈಸೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಇಂದು ಮೈಸೂರಿನ ಮಣಿಪಾಲ್‌ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸಿದ್ದಾರೆ.

ಆಸ್ಪತ್ರೆ ವೈದ್ಯರಾದ ಡಾ.ಅಜಯ್‌ ಹೆಗಡೆ ಬಳಿ ಚಿಕಿತ್ಸೆಗೆ ಆಗಮಿಸಿದ್ದು, ಎಲ್‌.5, ಎಸ್‌1 ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್‌ಗೆ ಬೆನ್ನಿಗೆ ಇಂಜೆಕ್ಷನ್‌ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಒಂದು ವೇಳೆ ಈ ಇಂಜೆಕ್ಷನ್‌ ಫಲಿಸದಿದ್ದಲ್ಲಿ 3 ದಿನಗಳ ಬಳಿಕ ಆಪರೇಷನ್‌ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. ಇಂದು ನಟ ದರ್ಶನ್‌ ಜೊತೆಗೆ ಆಪ್ತ ಹಾಗೂ ನಟ ಧನ್ವೀರ್‌ ಕೂಡ ಆಸ್ಪತ್ರೆಗೆ ಆಗಮಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಮೈಸೂರಿನಲ್ಲಿ ಇರಲು ಕೋರ್ಟ್‌ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ನಟ ದರ್ಶನ್‌ ತಮ್ಮ ಫ್ಯಾಮಿಲಿ ಸದಸ್ಯರೊಂದಿಗೆ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದು, ಫೇಸ್‌ಬುಕ್‌ ಪೋಸ್ಟ್‌ ಮಾಡುವ ಮೂಲಕ ಅಭಿಮಾನಿಗಳಿಗೆ ಹಬ್ಬದ ಶುಭಾಶಯ ಕೋರಿದ್ದರು.

ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ತಿಂಗಳಿಗೂ ಹೆಚ್ಚು ದಿನಗಳ ಕಾಲ ಜೈಲು ವಾಸ ಅನುಭವಿಸಿದ್ದ ದರ್ಶನ್‌ಗೆ ಹೈಕೋರ್ಟ್‌ ರೆಗ್ಯುಲರ್‌ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್‌ಗೂ ಅರ್ಜಿ ಸಲ್ಲಿಸಿದ್ದು, ಪ್ರಕರಣದ ವಿಚಾರಣೆ ಪ್ರಗತಿಯಲ್ಲಿದೆ.

ಹೀಗಿರುವಾಗಲೇ ನಟ ದರ್ಶನ್‌ ಅವರು ಶಸ್ತ್ರಚಿಕಿತ್ಸೆಗೆಂದು ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದು, ಆಪರೇಷನ್‌ ಸಕ್ಸಸ್‌ ಆಗುವ ಎಲ್ಲಾ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

 

Tags: