ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸಿದ್ದಾರೆ.
ಆಸ್ಪತ್ರೆ ವೈದ್ಯರಾದ ಡಾ.ಅಜಯ್ ಹೆಗಡೆ ಬಳಿ ಚಿಕಿತ್ಸೆಗೆ ಆಗಮಿಸಿದ್ದು, ಎಲ್.5, ಎಸ್1 ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್‌ಗೆ ಬೆನ್ನಿಗೆ ಇಂಜೆಕ್ಷನ್ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಒಂದು ವೇಳೆ ಈ ಇಂಜೆಕ್ಷನ್ ಫಲಿಸದಿದ್ದಲ್ಲಿ 3 ದಿನಗಳ ಬಳಿಕ ಆಪರೇಷನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. ಇಂದು ನಟ ದರ್ಶನ್ ಜೊತೆಗೆ ಆಪ್ತ ಹಾಗೂ ನಟ ಧನ್ವೀರ್ ಕೂಡ ಆಸ್ಪತ್ರೆಗೆ ಆಗಮಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಮೈಸೂರಿನಲ್ಲಿ ಇರಲು ಕೋರ್ಟ್ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ನಟ ದರ್ಶನ್ ತಮ್ಮ ಫ್ಯಾಮಿಲಿ ಸದಸ್ಯರೊಂದಿಗೆ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದು, ಫೇಸ್‌ಬುಕ್ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಹಬ್ಬದ ಶುಭಾಶಯ ಕೋರಿದ್ದರು.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ತಿಂಗಳಿಗೂ ಹೆಚ್ಚು ದಿನಗಳ ಕಾಲ ಜೈಲು ವಾಸ ಅನುಭವಿಸಿದ್ದ ದರ್ಶನ್‌ಗೆ ಹೈಕೋರ್ಟ್ ರೆಗ್ಯುಲರ್ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್‌ಗೂ ಅರ್ಜಿ ಸಲ್ಲಿಸಿದ್ದು, ಪ್ರಕರಣದ ವಿಚಾರಣೆ ಪ್ರಗತಿಯಲ್ಲಿದೆ.
ಹೀಗಿರುವಾಗಲೇ ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆಗೆಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಆಪರೇಷನ್ ಸಕ್ಸಸ್ ಆಗುವ ಎಲ್ಲಾ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…