ಮೈಸೂರು: ಡೆವಿಲ್ ಚಿತ್ರದ ಚಿತ್ರೀಕರಣ ಇಂದಿನಿಂದ ಮೈಸೂರಿನಲ್ಲಿ ಪುನರಾರಂಭಗೊಂಡಿದ್ದು, ಶೂಟಿಂಗ್‌ಗೂ ಮುನ್ನ ನಟ ದರ್ಶನ್ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಜಾಮೀನಿನ ಮೇಲೆ ಹೊರಬಂದು ಈಗ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ.
ಡೆವಿಲ್ ಚಿತ್ರದ ಶೂಟಿಂಗ್‌ಗೂ ಮುನ್ನ ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು.
ಈ ವೇಳೆ ಚಾಮುಂಡಿಬೆಟ್ಟದಲ್ಲಿ ಅಭಿಮಾನಿಗಳು ದರ್ಶನ್‌ರನ್ನು ನೋಡಿ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.





