ಮೈಸೂರು: ಇಂದು ಆಷಾಢ ಮಾಸದ ಎರಡನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಜೈಲಿನಲ್ಲಿದ್ದ ಕಾರಣ ದರ್ಶನ್ ಅವರು ಬೆಟ್ಟಕ್ಕೆ ಭೇಟಿ ನೀಡಿರಲಿಲ್ಲ.
ಆದರೆ ಈಗ ಜಾಮೀನಿನ ಮೇಲೆ ಹೊರಬಂದಿರುವ ಹಿನ್ನೆಲೆಯಲ್ಲಿ ಇಂದು ದಂಪತಿ ಸಮೇತ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.
ಇನ್ನು ದರ್ಶನ್ ಆಗಮಿಸುತ್ತಿದ್ದಂತೆ ನಟನ ಕಾರನ್ನು ಸುತ್ತುವರಿದ ಅಭಿಮಾನಿಗಳು,
ಜೈ ಡಿ ಬಾಸ್ ಎಂದು ಘೋಷಣೆ ಕೂಗುತ್ತ ಫೋಟೋ ತೆಗೆದುಕೊಳ್ಳಲು ಮುಂದಾದರು.





