ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಇಂದು ಬೆಳಿಗ್ಗೆ ಬೆಟ್ಟಕ್ಕೆ ಆಗಮಿಸಿದ ವಿಜಯಲಕ್ಷ್ಮೀ ಅವರು ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.
ವಿಜಯಲಕ್ಷ್ಮೀ ಅವರನ್ನು ನೋಡಿ ಜನರು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.




