Mysore
28
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಎಲ್ಲಾ ಭಾಷೆಗಳು ಎಲ್ಲಿಂದಲೋ ಹುಟ್ಟಿ ಬಂದಿವೆ: ಕಮಲ್‌ ಹಾಸನ್‌ ಹೇಳಿಕೆ ಸಮರ್ಥಿಸಿಕೊಂಡ ನಟ ಕಿಶೋರ್‌

actor kishor

ಮೈಸೂರು: ಒಂದು ಭಾಷೆಯಿಂದ ಇನ್ನೊಂದು ಭಾಷೆ ಬಂದಿದೆ ಎಂದರೆ ಅವಮಾನ ಎಂದು ಯಾಕೆ ಭಾವಿಸಬೇಕು ಎನ್ನುವ ಮೂಲಕ ಬಹುಭಾಷಾ ನಟ ಕಿಶೋರ್‌ ಅವರು ಕಮಲ್‌ ಹಾಸನ್‌ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಕನ್ನಡ ಭಾಷೆ ಬಗ್ಗೆ ನಟ ಕಮಲ ಹಾಸನ್ ವಿವಾದಿತ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ನಟ ಕಿಶೋರ್‌ ಅವರು, ನನ್ನ ತಾಯಿಯ ಹೊಟ್ಟೆಯಿಂದ ನಾನು ಹುಟ್ಟಿ ಬಂದೆ ಎಂದರೆ ನನಗೆ ಹಾಗೂ ನನ್ನ ತಾಯಿಗೆ ಅವಮಾನವಲ್ಲ. ಅದನ್ನು ಅವಹೇಳನಕಾರಿ ಎಂದು ಯಾಕೆ ಅಂದುಕೊಳ್ಳಬೇಕು? ಎಂದು ಪ್ರಶ್ನಿಸಿದರು.

ತುಂಬಾ ತಿಳಿದಂತಹ ಮನುಷ್ಯ ಏನೋ ಹೇಳಿದ್ದಾರೆ ಎಂದರೆ ಅದಕ್ಕೆ ತರ್ಕ ಇರಲಿದೆ. ಏನೋ ಅರ್ಥ ಇರಬೇಕು ಎಂದುಕೊಂಡು ಅದಕ್ಕೆ ಮರು ಪ್ರಶ್ನೆ ಕೇಳಿ ಏನು ಎಂಬುದನ್ನು ತಿಳಿದುಕೊಳ್ಳಬೇಕು. ಅವರ ಹೇಳಿಕೆಯನ್ನು ಅಷ್ಟೊಂದು ಭಾವುಕವಾಗಿ ನೋಡುವ ಅವಶ್ಯಕತೆ ಇಲ್ಲ. ಎಲ್ಲಾ ಭಾಷೆಗಳು ಎಲ್ಲಿಂದಲೋ ಹುಟ್ಟಿ ಬಂದಿರುತ್ತವೆ.
ಹಾಗಂತ ಭಾಷೆಗೆ ಮೇಲೂ-ಕೀಳು ಎಂಬುದಿಲ್ಲ. ಕನ್ನಡವು ಎಲ್ಲಿಂದಲೋ ಹುಟ್ಟಿ ಬಂದಿದೆ. ಹಾಗೆ ತಮಿಳು ಸಹ ಎಲ್ಲಿಂದಲೋ ಹುಟ್ಟಿ ಬಂದಿದೆ. ಭಾವುಕವಾಗಿ ಜನರನ್ನು ರೊಚ್ಚಿಗೆಬ್ಬಿಸಬಾರದು ಎಂದರು.

ಇನ್ನು ಈಗಾಗಲೇ ನಮ್ಮಲ್ಲಿ ಭಾಷೆ, ಜಾತಿ, ಧರ್ಮ ಎಲ್ಲವನ್ನು ಬಂಡವಾಳ ಮಾಡಿಕೊಂಡು ಕೆಲವರು ರಾಜಕೀಯ ಮಾಡಿಕೊಂಡಿದ್ದಾರೆ. ಭಾಷೆಯನ್ನು ಭಾವುಕತೆಯಿಂದ ನೋಡದೆ ಭಾಷೆಯನ್ನ ಭಾಷೆಯಾಗಿ ನೋಡಬೇಕು. ಒಬ್ಬ ತಿಳಿದ ಮನುಷ್ಯ ಏನೋ ಹೇಳಿದ್ದಾನೆ ಎಂದರೆ ಏನು ಎಂದು ಮತ್ತೊಮ್ಮೆ ಕೇಳಿ ಅದನ್ನು ಅರ್ಥ ಮಾಡಿಕೊಳ್ಳಬೇಕು. ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ. ತಮಿಳಿನಿಂದ ಕನ್ನಡ ಬಂದಿದ್ದರೆ ಸರಿ. ಒಂದೊಂದು ಭಾಷೆಯು ಎಲ್ಲಿಂದ ಬಂತು ಎಂದು ನಿಖರವಾದ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಇನ್ನೂ ಸಂಶೋಧನೆಗಳು ನಡೆಯುತ್ತಲೇ ಇದೆ. ಒಂದು ಭಾಷೆಯಿಂದ ಇನ್ನೊಂದು ಭಾಷೆ ಬಂದಿದೆ ಎಂದರೆ ಅವಮಾನ ಎಂದು ಯಾಕೆ ಭಾವಿಸಬೇಕು.? ಕಮಲ್ ಹಾಸನ್ ಹೇಳಿರೋದು ಸಹ ಒಂದು ಥಿಯರಿ(ಸಿದ್ಧಾಂತ) ಇರಬಹುದು. ಅವರ ಥಿಯರಿ ಏನು ಎಂದು ತಿಳಿದುಕೊಳ್ಳೋಣ. ನನ್ನ ಅಭಿಪ್ರಾಯದಲ್ಲಿ ಇದು ಅವಮಾನವಲ್ಲ ಎಂದು ಕಮಲ್‌ ಹಾಸನ್‌ ಹೇಳಿಕೆಯನ್ನ ಸಮರ್ಥಿಸಿಕೊಂಡರು.

Tags:
error: Content is protected !!