actor kishor
ಮೈಸೂರು: ಒಂದು ಭಾಷೆಯಿಂದ ಇನ್ನೊಂದು ಭಾಷೆ ಬಂದಿದೆ ಎಂದರೆ ಅವಮಾನ ಎಂದು ಯಾಕೆ ಭಾವಿಸಬೇಕು ಎನ್ನುವ ಮೂಲಕ ಬಹುಭಾಷಾ ನಟ ಕಿಶೋರ್ ಅವರು ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಕನ್ನಡ ಭಾಷೆ ಬಗ್ಗೆ ನಟ ಕಮಲ ಹಾಸನ್ ವಿವಾದಿತ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ನಟ ಕಿಶೋರ್ ಅವರು, ನನ್ನ ತಾಯಿಯ ಹೊಟ್ಟೆಯಿಂದ ನಾನು ಹುಟ್ಟಿ ಬಂದೆ ಎಂದರೆ ನನಗೆ ಹಾಗೂ ನನ್ನ ತಾಯಿಗೆ ಅವಮಾನವಲ್ಲ. ಅದನ್ನು ಅವಹೇಳನಕಾರಿ ಎಂದು ಯಾಕೆ ಅಂದುಕೊಳ್ಳಬೇಕು? ಎಂದು ಪ್ರಶ್ನಿಸಿದರು.
ತುಂಬಾ ತಿಳಿದಂತಹ ಮನುಷ್ಯ ಏನೋ ಹೇಳಿದ್ದಾರೆ ಎಂದರೆ ಅದಕ್ಕೆ ತರ್ಕ ಇರಲಿದೆ. ಏನೋ ಅರ್ಥ ಇರಬೇಕು ಎಂದುಕೊಂಡು ಅದಕ್ಕೆ ಮರು ಪ್ರಶ್ನೆ ಕೇಳಿ ಏನು ಎಂಬುದನ್ನು ತಿಳಿದುಕೊಳ್ಳಬೇಕು. ಅವರ ಹೇಳಿಕೆಯನ್ನು ಅಷ್ಟೊಂದು ಭಾವುಕವಾಗಿ ನೋಡುವ ಅವಶ್ಯಕತೆ ಇಲ್ಲ. ಎಲ್ಲಾ ಭಾಷೆಗಳು ಎಲ್ಲಿಂದಲೋ ಹುಟ್ಟಿ ಬಂದಿರುತ್ತವೆ.
ಹಾಗಂತ ಭಾಷೆಗೆ ಮೇಲೂ-ಕೀಳು ಎಂಬುದಿಲ್ಲ. ಕನ್ನಡವು ಎಲ್ಲಿಂದಲೋ ಹುಟ್ಟಿ ಬಂದಿದೆ. ಹಾಗೆ ತಮಿಳು ಸಹ ಎಲ್ಲಿಂದಲೋ ಹುಟ್ಟಿ ಬಂದಿದೆ. ಭಾವುಕವಾಗಿ ಜನರನ್ನು ರೊಚ್ಚಿಗೆಬ್ಬಿಸಬಾರದು ಎಂದರು.
ಇನ್ನು ಈಗಾಗಲೇ ನಮ್ಮಲ್ಲಿ ಭಾಷೆ, ಜಾತಿ, ಧರ್ಮ ಎಲ್ಲವನ್ನು ಬಂಡವಾಳ ಮಾಡಿಕೊಂಡು ಕೆಲವರು ರಾಜಕೀಯ ಮಾಡಿಕೊಂಡಿದ್ದಾರೆ. ಭಾಷೆಯನ್ನು ಭಾವುಕತೆಯಿಂದ ನೋಡದೆ ಭಾಷೆಯನ್ನ ಭಾಷೆಯಾಗಿ ನೋಡಬೇಕು. ಒಬ್ಬ ತಿಳಿದ ಮನುಷ್ಯ ಏನೋ ಹೇಳಿದ್ದಾನೆ ಎಂದರೆ ಏನು ಎಂದು ಮತ್ತೊಮ್ಮೆ ಕೇಳಿ ಅದನ್ನು ಅರ್ಥ ಮಾಡಿಕೊಳ್ಳಬೇಕು. ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ. ತಮಿಳಿನಿಂದ ಕನ್ನಡ ಬಂದಿದ್ದರೆ ಸರಿ. ಒಂದೊಂದು ಭಾಷೆಯು ಎಲ್ಲಿಂದ ಬಂತು ಎಂದು ನಿಖರವಾದ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಇನ್ನೂ ಸಂಶೋಧನೆಗಳು ನಡೆಯುತ್ತಲೇ ಇದೆ. ಒಂದು ಭಾಷೆಯಿಂದ ಇನ್ನೊಂದು ಭಾಷೆ ಬಂದಿದೆ ಎಂದರೆ ಅವಮಾನ ಎಂದು ಯಾಕೆ ಭಾವಿಸಬೇಕು.? ಕಮಲ್ ಹಾಸನ್ ಹೇಳಿರೋದು ಸಹ ಒಂದು ಥಿಯರಿ(ಸಿದ್ಧಾಂತ) ಇರಬಹುದು. ಅವರ ಥಿಯರಿ ಏನು ಎಂದು ತಿಳಿದುಕೊಳ್ಳೋಣ. ನನ್ನ ಅಭಿಪ್ರಾಯದಲ್ಲಿ ಇದು ಅವಮಾನವಲ್ಲ ಎಂದು ಕಮಲ್ ಹಾಸನ್ ಹೇಳಿಕೆಯನ್ನ ಸಮರ್ಥಿಸಿಕೊಂಡರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…