ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ಪ್ರಜ್ವಲ್ ದೇವರಾಜ್ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡರು.
ಇದೇ ಮಾರ್ಚ್.7ರಂದು ನಟ ಪ್ರಜ್ವಲ್ ದೇವರಾಜ್ ಅಭಿನಯದ ರಾಕ್ಷಸ ಸಿನಿಮಾ ಪ್ರೇಕ್ಷಕರ ಎದುರಿಗೆ ಬರಲು ಸಿದ್ಧವಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ಪ್ರಜ್ವಲ್ ದೇವರಾಜ್ ಅವರು ಗೆಳೆಯರೊಂದಿಗೆ ಭೇಟಿ ನೀಡಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು, ಚಿತ್ರ ಯಶಸ್ವಿಯಾಗಲೆಂದು ಪ್ರಾರ್ಥನೆ ಸಲ್ಲಿಸಿದರು.