ಮೈಸೂರು: ನಟ ದಿವಂಗತ ʻಪುನೀತ್ ರಾಜ್‌ಕುಮಾರ್ʼ ನಮ್ಮಿಂದ ಮರೆಯಾಗಿ 3 ವರ್ಷ ಕಳೆದಿವೆ. ಅವರ ನೆನಪು ಕನ್ನಡಿಗರಲ್ಲಿ ಅಚ್ಚಳಿಯದೆ ಉಳಿದಿದೆ. ಅವರು ಜನರ ಮನಸ್ಸಿನಲ್ಲಿ ಇಂದಿಗೂ ಅಮರವಾಗಿದ್ದಾರೆ ಎಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಹೇಳಿದರು.
ನಗರದ ಅಗ್ರಹಾರದ ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ನಟ ಪುನೀತ್ ರಾಜ್‌ಕುಮಾರ್ ಅವರ 3ನೇ ವರ್ಷದ ಪುಣ್ಯಸ್ಮರಣೆಯಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಅವರು ಮಾತನಾಡಿದರು.
ಇಡೀ ದೇಶವೇ ಪುನೀತ್ ಅವರನ್ನು ಇಂದಿಗೂ ಸ್ಮರಣೆ ಮಾಡುತ್ತದೆ. ಅವರ ಒಳ್ಳೆಯ ಕಾರ್ಯಗಳು ಎಲ್ಲರಿಗೂ ದಿಕ್ಸೂಚಿಯಾಗಿವೆ. ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಶಂಕರ ಮಠದ ಧರ್ಮದರ್ಶಿ ರಾಮಚಂದ್ರ ರಾಯರು, ಎಂ.ಆರ್ ಬಾಲಕೃಷ್ಣ, ನಾಗಶ್ರೀ ಸುಚೀಂದ್ರ, ವಿದ್ಯಾ, ಗೋಪಾಲ್ ರಾವ್ ,ಪಣೀಶ್, ರಂಗನಾಥ್, ನಾಗಭೂಷಣ್, ಕೆ ಎಂ ನಿಶಾಂತ್, ಜ್ಯೋತಿ ಹಾಗೂ ಇನ್ನಿತರರು ಹಾಜರಿದ್ದರು.
- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…