Mysore
34
few clouds

Social Media

ಶನಿವಾರ, 11 ಏಪ್ರಿಲ 2026
Light
Dark

ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇಂದು ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ನಟ ಸುದೀಪ್‌ ಅವರು, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಚಾಮುಂಡಿಬೆಟ್ಟದಲ್ಲಿ ನಟ ಸುದೀಪ್‌ರನ್ನು ಕಂಡು ಅಭಿಮಾನಿಗಳು ಜೈಕಾರ ಹಾಕಿ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

 

Tags:
error: Content is protected !!