ಮೈಸೂರು: ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್ ದಂಪತಿ ಭೇಟಿ ನೀಡಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಇಂದು ಬೆಳ್ಳಂಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್ ದಂಪತಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಎಲ್ಲರಿಗೂ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.
ನಟ ಸುದೀಪ್ ಕರ್ಲಿ ಹೇರ್‌ನಲ್ಲಿ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಈ ವೇಳೆ ಸುದೀಪ್‌ಗೆ ಬಿಗ್ ಬಾಸ್ ವಿನಯ್ ಗೌಡ ಸೇರಿದಂತೆ ಇತರರು ಸಾಥ್ ನೀಡಿದರು.





