ಮೈಸೂರು ನಗರ

ಮೈಸೂರಲ್ಲಿ ಜಾಹೀರಾತು ಜಟಾಪಟಿ..!

ಮೈಸೂರು: ಮೈತ್ರಿ ಪಕ್ಷಗಳು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಟಕ್ಕರ್‌ ಕೊಡಲು ಕಾಂಗ್ರೆಸ್ ನಗರದಲ್ಲಿ ಜನಾಂದೋಲನ‌ ಸಭೆ ಆಯೋಜಿಸಿದೆ. ಮೈತ್ರಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಜಿದ್ದಿಗೆ ಬಿದ್ದಂತೆ ತಮ್ಮ ಕಾರ್ಯಕ್ರಮಗಳ ಯಶಸ್ಸಿಗೆ ಪಣತೊಟ್ಟಿ ನಿಂತಿವೆ.

ಈ ಮಧ್ಯೆ, ನಗರದ ವಿವಿಧ ವೃತ್ತಗಳಲ್ಲಿ ರಾತ್ರೋರಾತ್ರಿ ದೊಡ್ಡದೊಡ್ಡ ಫ್ಲೆಕ್ಸ್‌ಗಳು ತಲೆ ಎತ್ತಿ ನಿಂತಿವೆ. ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ ಎನ್ನುವ ಶೀರ್ಷಿಕೆಯಡಿಯಲ್ಲಿ ನಗರದ ಮೆಟ್ರೋಪಾಲ್‌ ವೃತ್ತದಲ್ಲಿ ಜಾಹೀರಾತು ಹಾಕಲಾಗಿದೆ. 2023ರ ಫ್ರಬ್ರವರಿ ತಿಂಗಳಲ್ಲಿ ಬಿಜೆಪಿ ಜೆಡಿಎಸ್‌ ವಿರುದ್ಧ ನೀಡಿದ್ದ ಪ್ರಕಟಣೆ ಎಂದು ಫ್ಲೆಕ್ಸ್‌ನಲ್ಲಿ ಹಾಕಲಾಗಿದೆ.

ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತ, ಮೆಟ್ರೋಪಾಲ್‌, ರಾಮಸ್ವಾಮಿ ಸರ್ಕಲ್‌ ಹಾಗೂ ಜೆಎಲ್‌ಬಿ ರಸ್ತೆ ಸೇರಿದಂತೆ ವಿವಿಧೆಡೆ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ. ಈ ಹಿಂದೆ ಬಿಜೆಪಿಯು ಜೆಡಿಎಸ್‌ನ ದೊಡ್ಡಗೌಡರ ಕುಟುಂಬದ ವಿರುದ್ಧ ನೀಡಿದ್ದ ಭೂಕಬಳಿಕೆ ಜಾಹೀರಾತನ್ನು ಕಾಂಗ್ರೆಸ್‌ ಫ್ಲೆಕ್ಸ್‌ ಮಾಡಿಸಿ ಪ್ರಕಟಿಸಿದೆ. ಹೀಗಾಗಿ, ಮೈತ್ರಿ ಪಕ್ಷಗಳು ಭಾರೀ ಮುಜುಗರವನ್ನು ಎದುರಿಸುವಂತಾಗಿದೆ.

ಇನ್ನು ಈ ಜಾಹೀರಾತನ್ನು ತೆರವುಗೊಳಿಸಬೇಕು ಎಂದು ಜೆಡಿಎಸ್‌ನ ಮಾಜಿ ಶಾಸಕ ಸಾ.ರಾ ಮಹೇಶ್‌ ಹಾಗೂ ಮುಖಂಡರು ಪ್ರತಿಭಟನೆ ಮಾಡಿದರು.

ಈ ವೇಳೆ ಪೊಲೀಸರು ಹಾಗೂ ಜೆಡಿಎಸ್‌ನ ಮುಖಂಡರ ನಡುವೆ ವಾಗ್ವಾದ ನಡೆದು, ಕೊನೆಗೆ ಪೊಲೀಸರು ಸಾ.ರಾ ಮಹೇಶ್‌ ಸೇರಿದಂತೆ ಮುಖಂಡರನ್ನು ವಶಕ್ಕೆ ಪಡೆದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

11 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

11 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

11 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

11 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

12 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

12 hours ago