Mysore
23
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ದೆಹಲಿಯಲ್ಲಿ ಮತ್ತಷ್ಟು ಕುಸಿದ ವಾಯು ಗುಣಮಟ್ಟ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯು ಗುಣಮಟ್ಟ ದಿನದಿಂದ ದಿನಕ್ಕೆ ಹದಗೆಡುತ್ತಿದೆ.

ಗಾಳಿಯ ಗುಣಮಟ್ಟ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಹತೋಟಿಗೆ ತರಲು ಮಾಲಿನ್ಯ ವಿರೋಧಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ದೆಹಲಿಯಲ್ಲಿ ಶುದ್ಧ ಇಂಧನಗಳನ್ನು ಹೊತ್ತ ಟ್ರಕ್‌ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಟ್ರಕ್‌ಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಇದರ ಜೊತೆಗೆ ದೆಹಲಿ ಸರ್ಕಾರ ಮಕ್ಕಳಿಗೆ ಶಾಲೆಗೆ ಹಾಜರಾಗುವ ಬದಲು ಆನ್‌ಲೈನ್‌ನಲ್ಲಿ ತರಗತಿಗಳನ್ನು ಆರಂಭಿಸುವ ಸಾಧ್ಯತೆಯಿದೆ.

ಇನ್ನು ದೆಹಲಿ ನಿವಾಸಿಗಳು ತೀವ್ರ ವಾಯುಮಾಲಿನ್ಯದಿಂದ ಕಿರಿಕಿರಿ ಅನುಭವಿಸುತ್ತಿದ್ದು, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ.

ದೆಹಲಿಗೆ ಹೋಗುವ ಹೊಸಬರು ತಕ್ಷಣವೇ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ದಟ್ಟವಾದ ಹೊಗೆಯು ಸಾರಿಗೆ ವ್ಯವಸ್ಥೆಯ ಮೇಲೆ ಪ್ರಭಾವ ಬೀರಿದ್ದು, ದೆಹಲಿ ಏರ್‌ಪೋರ್ಟ್‌ನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

 

Tags:
error: Content is protected !!