ಮೈಸೂರು ನಗರ

ಭಾರತೀಯರೆಲ್ಲರೂ ದೇಶದ ಏಕತೆಗೆ ಸಹಕರಿಸಬೇಕು: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ಘಟನೆ ಯಾವ ರೀತಿ ನಡೆದಿರುವುದು ಎಂದು ಎಲ್ಲರಿಗೂ ಗೊತ್ತಿದೆ. ಹೀಗಾಗಿ ಈ ಘಟನೆಯಿಂದ ಭಾರತೀಯರೆಲ್ಲರೂ ಒಗ್ಗಟ್ಟಾಗಬೇಕಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಜನತೆಗೆ ಸಲಹೆ ನೀಡಿದ್ದಾರೆ.

ದೇಶದ ಆಂತರಿಕ ಭದ್ರತೆ ಕುರಿತು ಕಾಂಗ್ರೆಸ್‌ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಯದುವೀರ್‌ ಒಡೆಯರ್‌ ಅವರು, ಪಾಕಿಸ್ತಾನದ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಮುಂದಾಗಿದೆ. ಈ ಬೆಳವಣಿಗೆ ಮಧ್ಯೆ ಆಂತರಿಕ ಭದ್ರತೆ ಬಗ್ಗೆ ಕಾಂಗ್ರೆಸ್ ಆರೋಪ ಮಾಡುವುದು ಸರಿಯಲ್ಲ. ವೈಫಲ್ಯದ ಕುರಿತು ಎಲ್ಲಾ ರೀತಿಯ ಪರಿಶೀಲನೆ ನಡೆಸಬೇಕು. ಆ ನಂತರದಲ್ಲಿ ಭದ್ರತೆ ಬಗ್ಗೆ ಹೇಳಲಿ.

ನಾವು ಇದಕ್ಕೆ ಕಠಿಣ ಪ್ರತಿಕ್ರಿಯೆ ನೀಡಬೇಕಾಗಿದೆ. ಭದ್ರತೆ ಕುರಿತು ಯಾವುದೇ ರಾಜಿ ಇಲ್ಲ. ಕಾಂಗ್ರೆಸ್‌ನವರಿಗೆ ಆರೋಪ ಮಾಡುವುದಕ್ಕೆ ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಸಾಕಷ್ಟು ಭಯೋತ್ಪಾದಕ ಚಟುವಟಿಕೆಗಳು ಇದ್ದವೆಂದು ಎಲ್ಲರಿಗೂ ಗೊತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಬೇಡ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಭಾರತೀಯರೆಲ್ಲರೂ ದೇಶದ ಏಕತೆಗೆ ಸಹಕರಿಸಬೇಕು. ಪಾಕಿಸ್ತಾನ ಏನು ಎಂಬುದು ಇಡೀ ವಿಶ್ವಕ್ಕೆ ಗೊತ್ತು. ಪಾಕಿಸ್ತಾನ ಭಯೋತ್ಪಾದಕರನ್ನು ರಕ್ಷಿಸುವ ತಾಣವಾಗಿದೆ. ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ ಕಳುಹಿಸುವ ನಿರ್ಧಾರ ಸರಿಯಾಗಿದೆ ಎಂದು ಕೇಂದ್ರ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

8 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

8 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

8 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

8 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

9 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

17 hours ago