ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೊಂದಲ ನಿವಾರಣೆ ಮಾಡುವಂತೆ ಸುರ್ಜೆವಾಲಾ ಬಳಿ ಮನವಿ ಮಾಡಿದ್ದೇನೆ. ರಾಜಕೀಯವಾಗಿ ರಾಜ್ಯದಲ್ಲಿ ಯಾವುದೂ ಸರಿಯಿಲ್ಲ. ರಾಜ್ಯದಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ. ಹೀಗೆ ಆದರೆ ಬೇರೆ ಪಕ್ಷಕ್ಕೂ ನಮ್ಮ ಪಕ್ಷಕ್ಕೂ ಏನು ವ್ಯತ್ಯಾಸ? ಪಕ್ಷದ ಕಾರ್ಯಾಧ್ಯಕ್ಷನಾಗಿ ನನಗೂ ಜವಾಬ್ದಾರಿಗಳಿವೆ. ಅನಾಹುತ ಆಗುವ ಮುನ್ನವೇ ಹೈಕಮಾಂಡ್ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.
ಇನ್ನು ಒಂದು ಬಾರಿ ಗೆದ್ದವರು ಸಚಿವರಾಗಬೇಕಾದರೆ, ಆರನೇ ಬಾರಿ ಗೆದ್ದವರು ಸಿಎಂ ಆಗಬಾರದಾ? ರಾಜ್ಯದಲ್ಲಿ ಹಾವು ಮುಂಗುಸಿ ಆಟ ನಡೆಯುತ್ತಿದೆ. ಇದರಿಂದ ಪಕ್ಷಕ್ಕೆ ಡ್ಯಾಮೇಜ್. ಈ ಕುರಿತು ವರಿಷ್ಠರ ಗಮನಕ್ಕೆ ತಂದಿರುವೆ ಎಂದು ಹೇಳಿದರು.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…
ಛತ್ತೀಸ್‌ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ.…