ಮೈಸೂರು ನಗರ

ಕ್ಷೇತ್ರದಲ್ಲಿ ಮಳೆ ಅನಾಹುತ ತಡೆಗಟ್ಟಲು ಎಲ್ಲಾ ರೀತಿಯ ಕ್ರಮ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಚಾಮರಾಜ ಕ್ಷೇತ್ರದಲ್ಲಿ ಮಳೆ ಅನಾಹುತ ತಡೆಗಟ್ಟಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಗ್ಗು ಪ್ರದೇಶಗಳಲ್ಲಿ ನೀರು ಮನೆಗಳಿಗೆ ನುಗ್ಗುವುದನ್ನ ತಡೆಗಟ್ಟುವ ಕಾಮಗಾರಿಯನ್ನೂ ಮುಗಿಸಿದ್ದೇವೆ. ಯುಜಿಡಿ ನೀರು ಬ್ಲಾಕ್ ಆಗದಂತೆ ಜಟ್ಟಿಂಗ್ ಮಿಷನ್‌ಗಳನ್ನ ಕೂಡ ಸಜ್ಜಾಗಿಟ್ಟುಕೊಂಡಿದ್ದೇವೆ.

ಕಾರ್ಪೋರೇಷನ್ ಸಹಕಾರದೊಂದಿಗೆ ಎಲ್ಲೂ ಯಾವ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ ಹಲವು ಸಲಹೆ, ಸೂಚನೆ ಕೊಟ್ಟಿದ್ದೇನೆ. ರಸ್ತೆ ಬದಿ ಇರುವ ಹಳೆ ಮರಗಳ ರೆಂಬೆ, ಕೊಂಬೆಗಳ ತೆರವು ಮಾಡುವುದಕ್ಕೂ ಸೂಚನೆ ನೀಡಿದ್ದೇವೆ. ಮೇಟಗಳ್ಳಿ, ಕುಂಬಾರ ಕೊಪ್ಪಲು, ಬಿಎಂಶ್ರೀ ನಗರದ ಕೆಲವು ಕಡೆ ತಗ್ಗು ಪ್ರದೇಶಗಳಲ್ಲಿ ಸ್ವಲ್ಪ ಸಮಸ್ಯೆ ಉಂಟಾಗುತ್ತದೆ. ಈಗಾಗಲೇ ಅಲ್ಲೆಲ್ಲಾ ಸಮಸ್ಯೆಗಳನ್ನು ಸರಿಪಡಿಸಲಾಗಿದೆ. ಈಗ ಬೀಳುವ ಮಳೆಗೆ ಮುಂಜಾಗ್ರತಾ ಕ್ರಮವನ್ನು ಸಮಾರೋಪಾದಿಯಲ್ಲಿ ತೆಗೆದುಕೊಳ್ಳಲು ಎಲ್ಲರೂ ಸಜ್ಜಾಗಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

36 mins ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

48 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

2 hours ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

3 hours ago