Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪೂಜೆ , ದರ್ಶನಕ್ಕೆ ಭರದಿಂದ ಸಾಗಿದ ಸಿದ್ಧತೆ

ಮೈಸೂರು : ನಗರದ ಚಾಮುಂಡಿಬೆಟ್ಟದಲ್ಲಿ ಜುಲೈ ೧೨ ರಂದು ಮೊದಲ ಅಷಾಢ ಶುಕ್ರವಾರದ ಪೂಜೆ ನಡೆಯಲಿದ್ದು, ಭಕ್ತರಿಗೆ ತೊಂದರೆಯಾಗದ ರೀತಿಯಲ್ಲಿ ದೇವಿಯ ದರ್ಶನಕ್ಕೆ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

ಆಷಾಢ ಶುಕ್ರವಾರದ ಆಚರಣೆಗಳಲ್ಲಿ ನಗರ ಮತ್ತು ಹೊರಗಿನಿಂದ ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಡಿಸಿ ಜಿ ಲಕ್ಷ್ಮೀಕಾಂತ್‌ ರೆಡ್ಡಿ, ಹೆಚ್ಚುವರಿ ಡಿಸಿ ಪಿ ಶಿವರಾಜ್‌, ನಗರ ಪೊಲೀಸ್‌ ಆಯುಕ್ತ ಸೀಮಾ ಲಾಟ್ಕರ್‌, ಡಿಸಿಪಿ ಎಂ ಮುತ್ತುರಾಜ್‌ ಸೇರಿದಂತೆ ಜಿಲ್ಲಾಡಳಿತ ಮತ್ತು ನಗರ ಪೊಲೀಸ್‌ ಹಿರಿಯ ಅಧಿಕಾರಿಗಳು ಮತ್ತು ಡಿಸಿಪಿ ಎಸ್‌ ಜಾಹ್ನವಿ ಬೆಟ್ಟಕ್ಕೆ ಭೇಟಿ ನೀಡಿ ಈಗಾಗಲೇ ಸಿದ್ಧತೆ ಬಗ್ಗೆ ಮೇಲ್ವಿಚಾರಣೆ ನಡೆಸಿದ್ದಾರೆ.

ಇದರ ಜೊತೆಗೆ ಈಗಾಗಲೇ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜನಸಂದಣಿ ನಿಯಂತ್ರಣ, ಸರತಿ ಸಾಲು ನಿರ್ವಹಣೆ, ಜೊತೆಗೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ವ್ಯವಸ್ಥೆ ಸಂಬಂಧಿಸಿ ಸಲಹೆ ಮತ್ತು ಸೂಚನೆ ನೀಡಿದ್ದಾರೆ.

ಇನ್ನು ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಬೆಟ್ಟಕ್ಕೆ ಹೋಗಲು ಉಚಿತ KSRTC ಬಸ್‌ ಗಳ ವ್ಯವಸ್ಥೆ ಮಾಡಲಾಗಿದೆ. ಲಲಿತ ಮಹಲ್‌ ಹೆಲಿಪ್ಯಾಡ್‌ ಬಳಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಫ್ಲೆಕ್ಸ್‌ ಬ್ಯಾನರ್‌ ಗಳು & ಬೋರ್ಡ್‌ ಗಳು ಮತ್ತು ಇತರ ಪ್ರಚಾರ ಸಾಮಾಗ್ರಿಗಳ ಪ್ರದರ್ಶನ ನಿಷೇಧಿಸಲಾಗಿದೆ. ಯಾವುದೇ ವಿಶೇಷ ಪಾಸ್‌ ಗಳು ಇಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

Tags: