ಮೈಸೂರು: ಯುಪಿಐ ಮೂಲಕ ಲಂಚ ಪಡೆದ ಆರೋಪದಡಿ ಮೈಸೂರಿನ ಮೂವರು ಅಧಿಕಾರಿಗಳ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಈ ಕುರಿತು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನ ತಹಸೀಲ್ದಾರ್ ಶ್ರೀನಿವಾಸ್, ಅಂತರಸಂತೆ ನಾಡಕಚೇರಿಯ ರೆವಿನ್ಯು ಇನ್ಸ್‌ಪೆಕ್ಟರ್ ಗೋವಿಂದರಾಜು ಹಾಗೂ ಎನ್.ಬೆಳ್ತೂರು ಗ್ರಾಮ ಲೆಕ್ಕಾಡಳಿತಾಧಿಕಾರಿ ನಾಗರಾಜು ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಎಚ್.ಡಿ.ಕೋಟೆಯ ಬಿ.ವಿ.ಮಮತಾ ಕುಮಾರಿ ಎಂಬುವವರ ಬಳಿ ಅಧಿಕಾರಿಗಳು 50 ಸಾವಿರ ರೂಪಾಯಿಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗುಂಡತ್ತೂರು ಗ್ರಾಮದ ಸರ್ವೆ ನಂ.10ರ 5 ಎಕರೆ 1 ಗುಂಟೆ ಭೂಮಿಯನ್ನು ನ್ಯಾಯಾಲಯದ ಆದೇಶ ಉಲ್ಲಂಘಿಸಿ ಅಧಿಕಾರಿಗಳು ಆಸ್ತಿ ಪರಭಾರೆ ಮಾಡಿದ್ದರು. ಬಳಿಕ ಆಸ್ತಿ ಹಂಚಿಕೆ ಮಾಡಿ ಮಾರಾಟ ಮಾಡಲು ಹಾಗೂ ಹಿಂದಿನಂತೆ ದಾಖಲೆಗಳನ್ನು ಯಥಾಸ್ಥಿತಿ ಕಾಪಾಡಿಕೊಳ್ಳಲು ಲಂಚಕ್ಕೆ ಬೇಡಿಕೆಯನ್ನಿಟ್ಟಿದ್ದರು.
ಈ ವಿಚಾರವಾಗಿ ಮೊದಲ ಹಂತದಲ್ಲಿ 5 ಸಾವಿರ ಫೋನ್ ಪೇ ಮೂಲಕ ಲಂಚ ಪಡೆದು ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…