ಪಿರಿಯಾಪಟ್ಟಣ: ತಂಬಾಕು ಮಂಡಳಿಯ ಹರಾಜು ಮಾರುಕಟ್ಟೆ ಸಂಖ್ಯೆ 5 ರಲ್ಲಿ ರೈತರಿಂದ ಸಂಗ್ರಹಣೆ ಮಾಡಿದ್ದ 6 ಕೋಟಿಗಳಿಗೂ ಹೆಚ್ಚು ಹಣವನ್ನು ಬ್ಯಾಂಕಿಗೆ ಪಾವತಿಸದೆ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಕೊಂಡು ಅವ್ಯವಹಾರ ನಡೆಸಿರುವ ಶಂಕೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಮತ್ತು ತಂಬಾಕು ಬೆಳೆಗಾರ ಗೊರಳ್ಳಿ ಅಶ್ವತ್ ಆರೋಪಿಸಿದರು.
ಈ ಕುರಿತು ಗುರುವಾರ ಪಟ್ಟಣದ ಕಾರ್ಯನಿರತ ಪತ್ರಕರ್ತ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು, ರೈತರಿಗೆ ತಂಬಾಕು ಮಂಡಳಿ ಮುಂಗಡವಾಗಿ 49 ಸಾವಿರ ರೂ. ಮೌಲ್ಯದ ರಸಗೊಬ್ಬರ ವಿತರಿಸುತ್ತಿದ್ದು, ಈ ಹಣವನ್ನು ರೈತರು ತಂಬಾಕು ಮಾರುಕಟ್ಟೆಗೆ ತಂಬಾಕು ಮಾರಾಟ ಮಾಡಿದ ನಂತರ ರೈತರಿಂದ ಪಡೆದುಕೊಂಡು ಬ್ಯಾಂಕಿಗೆ ಪಾವತಿಸಬೇಕಾಗಿತ್ತು. ಆದರೆ ಬ್ಯಾಂಕಿಗೆ ಪಾವತಿಸದೆ ತಮ್ಮ ಇಷ್ಟ ಬಂದ ಜನರ ಖಾತೆಗಳಿಗೆ ವರ್ಗಾಯಿಸಿಕೊಂಡು ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು.
ಅಧಿಕಾರಿಗಳ ಪ್ರೋತ್ಸಾಹ ಇಲ್ಲದೆ ಹಗರಣ ಮಾಡಲು ಸಾಧ್ಯವಿಲ್ಲ, ತಂಬಾಕು ಮಂಡಳಿಯಲ್ಲಿ ಪ್ರತಿ ವರ್ಷ ಲೆಕ್ಕ ಪರಿಶೋಧನೆ ಮಾಡಿಸುವ ಪದ್ಧತಿ ಇದ್ದು, ಹಗರಣ ಆಗಿರುವಂತಹ ವರ್ಷಗಳಲ್ಲಿ ಯಾವ ಕಾರಣಕ್ಕೆ ಆಡಿಟ್ ಆಗಿಲ್ಲ? ಆಗಿದ್ದರೆ ಏಕೆ ಅಧಿಕಾರಿಗಳು ಈ ವಿಷಯವನ್ನು ಬಹಿರಂಗ ಪಡಿಸಿಲ್ಲ ಎಂದು ಪ್ರಶ್ನಿಸಿದರು.
ಕೋಟಿ ಕೋಟಿ ಹಣ ರೈತರಿಗೆ ವಂಚಿಸಿದ್ದರೂ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಿಮಿನಲ್ ಪ್ರಕರಣವನ್ನು ಏಕೆ ದಾಖಲಿಸಿಲ್ಲ, ಆದ್ದರಿಂದ ರೈತರ ಹಣ ವಂಚನೆಯ ಸಮಯದಲ್ಲಿದ್ದ ಅಧಿಕಾರಿಗಳ ವಿರುದ್ಧ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…