ಮೈಸೂರು ನಗರ

ಜಾತಿ ಜತೆಗೆ ಕನಸು ಕಾಣುವ ಅಸಮಾನತೆಯೂ ಸೃಷ್ಟಿ : ನಾಗಭೂಷಣಸ್ವಾಮಿ ವಿಷಾದ

ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು ಜಾತಿ ಅಸಮಾನತೆ ಜೊತೆಗೆ ಕನಸು ಕಾಣುವ ಅಸಮಾನತೆಯೂ ಸಮಾಜದಲ್ಲಿ ಸೃಷ್ಟಿಯಾಗಿದೆ ಎಂದು ವಿಮರ್ಶಕ ಪ್ರೊ.ಓ.ಎಲ್. ನಾಗಭೂಷಣ ಸ್ವಾಮಿ ವಿಷಾದಿಸಿದರು.

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ದಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ‍್ಸ್ ಸಂಸ್ಥೆಯ ಸಭಾಂಗಣದಲ್ಲಿ ಭಾನುವಾರ ಕವಿತಾ ಪ್ರಕಾಶನದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಮೇಶ್ ಚಂದ್ರ ಅವರ ‘ಝಹಾದಿಯೊಳಗಣ ಹಾಡೇ ಝ’, ಗಣೇಶ್ ಅಮಿನಗಡ ಅವರ ‘ಕೈದಿಗಳ ಕಥನ’, ‘ರಂಗ ಪ್ರಸಂಗ’ ಹಾಗೂ ‘ರಂಗ ಕರ್ಪೂರ’ ಕವನ ಸಂಕಲನಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಜೈಲಿಗೆ ಹೋಗಿ ಬಂದ ನಂತರ ಅಪರಾಧದ ಕಳಂಕವನ್ನು ಜೀವನಪೂರ್ತಿ ಹೊತ್ತಿಕೊಂಡು ಬದುಕ ಬೇಕೇ ಎಂಬ ಪ್ರಶ್ನೆ ಮೂಡುತ್ತದೆ. ಆದರೆ, ಇದೇ ಅಪಮಾನ ರಾಜಕಾರಣಿಗಳಿಗೆ ಯಾಕೆ ಆಗುವುದಿಲ್ಲ? ಸಾವಿರಾರು ಕೋಟಿ ರೂ. ದುಡ್ಡು ಮಾಡಿರುವವರನ್ನು ಅಪರಾಧಿಗಳೆಂದು ತಿಳಿದಿದ್ದರೂ ಅವರಿಗೆ ನಮಸ್ಕಾರ ಮಾಡಿ ಹಾರ, ತುರಾಯಿ ಹಾಕಲಾಗುತ್ತದೆ. ನಮ್ಮ ನ್ಯಾಯದ ಕಲ್ಪನೆಯನ್ನೇ ಪ್ರಶ್ನೆ ಮಾಡಿಕೊಳ್ಳುವಂತಹ ಪರಿಸ್ಥಿತಿ ಇದೆ ಎಂದು ಹೇಳಿದರು.

ಜೈಲಿನಲ್ಲಿರುವ ಕೈದಿಗಳಿಗಿಂತ ಸಹಸ್ರಪಟ್ಟು ಅಪರಾಧ ಮಾಡಿರುವ ರಾಜಕಾರಣಿಗಳು ನಮ್ಮನ್ನು ಆಳುತ್ತಿದ್ದಾರೆ. ಅವರು ಶ್ರೀಮಂತಿಕೆಯಲ್ಲಿ ಸುಖವಾಗಿಯೇ ಬದುಕುತ್ತಿದ್ದಾರೆ. ಆದರೆ, ನಾವು ಅವರನ್ನು ಅಪರಾಧಿಗಳೆಂದು ಕನಸು, ಮನಸ್ಸಿನಲ್ಲಿಯೂ ಭಾವಿಸುತ್ತಿಲ್ಲ ಎಂದು ವಿಷಾದಿಸಿದರು.

ಜೈಲಿನಲ್ಲಿ ಇರುವವರಲ್ಲಿ 100 ರಲ್ಲಿ 98 ಮಂದಿ ಹಳ್ಳಿಗಳಿಂದ ಬಂದ ಬಡವರು, ಅಲ್ಪ ಶಿಕ್ಷಿತರು. ಶಿಕ್ಷಣ ಪಡೆದವರಿದ್ದರೂ ನ್ಯಾಯವನ್ನು ಖರೀದಿಸಲು ಸಾಧ್ಯವಾಗದವರೇ ಹೆಚ್ಚು. ಅವರ ಮನಸ್ಥಿತಿಯನ್ನು ಅರಿತು ಅವರನ್ನು ಸುಧಾರಣೆ ಮಾಡಬೇಕಾಗಿದೆ ಎಂದು ತಿಳಿಸಿದರು.

ಲೇಖಕರಾದ ರಮೇಶ್‌ಚಂದ್ರ, ಗಣೇಶ್ ಅಮಿನಗಡ, ಹಿರಿಯ ರಂಗಕರ್ಮಿ ಹುಲಿಗಪ್ಪ ಕಟ್ಟಿಮನಿ, ಬಿಡುಗಡೆಗೊಂಡ ಕೈದಿಗಳಾದ ಎಚ್.ವಿ.ರಮೇಶ್, ಮಹೇಶ ಬಾಗಳಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

7 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

8 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

8 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

9 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

9 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

9 hours ago