ಮೈಸೂರು: ಸಂವಿಧಾನ ಜಾರಿಗೂ ಮುನ್ನ ದೇಶಕ್ಕೆ ಮೀಸಲಾತಿ ಪರಿಚಯಿಸಿದ್ದ ಕೀರ್ತಿ ಕರ್ನಾಟಕ ರಾಜ್ಯಕ್ಕೆ ಸಲ್ಲುತ್ತದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇಲ್ವರ್ಗದವರಿಗೆ ಹೆಚ್ಚಿನ ಪ್ರಧಾನ್ಯತೆ ಇದ್ದ ವೇಳೆ ಹಿಂದುಳಿದವರಿಗೆ ಪ್ರಧಾನ್ಯತೆ ನೀಡಬೇಕಾದ ಅವಶ್ಯಕತೆ ಇತ್ತು. ಈ ವೇಳೆ ಮೈಸೂರು ಸಂಸ್ಥಾನ ಮಿಲ್ಲರ್ ಕಮಿಟಿಯ ಮೂಲಕ ಮೀಸಲಾತಿ ನೀಡಿತು. ಈ ಮೂಲಕ ದೇಶಕ್ಕೆ ಸಂವಿಧಾನ ಜಾರಿಗೂ ಮುನ್ನ ಮೀಸಲಾತಿ ಪರಿಚಯಿಸಿದ ಕೀರ್ತಿ ಕರ್ನಾಟಕಕ್ಕೆ ಸಲ್ಲುತ್ತದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಕಾರ್ಯಕ್ರಮದಲ್ಲೂ ಎಸ್ಸಿ, ಎಸ್ಟಿ ಸಮುದಾಯದ ಜನರು ಭಾಗವಹಿಸಲು ರಾಜರು ಅವಕಾಶ ಕಲ್ಪಿಸಿದ್ದರು. ಇದನ್ನು ಡಾ.ಬಿ.ಆರ್.ಅಂಬೇಡ್ಕರ್ ಸ್ಮರಿಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ನೆನಪಿಗೆ ಅನೇಕ ಕೆಲಸಗಳನ್ನು ಮಾಡುತ್ತಿದೆ. ಜನ್ಮ ಸ್ಥಳ, ಶಿಕ್ಷಣ ಪಡೆದ ಸ್ಥಳಗಳನ್ನು ರಕ್ಷಣೆ ಮಾಡಿ ಸಾರ್ವಜನಿಕರು ವೀಕ್ಷಣೆ ಮಾಡಲು ಅವಕಾಶ ನೀಡಿದೆ. ಮಹಾ ಪರಿನಿರ್ವಾಣದ ಸ್ಥಳ ರಕ್ಷಣೆ, ಬೌದ್ಧ ಧರ್ಮ ಸ್ವೀಕರಿಸಿದ ನಾಗಪುರ ಸ್ಥಳ ರಕ್ಷಣೆ ಮಾಡುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಮಹಾತ್ಕಾರ್ಯವನ್ನು ಬಿಜೆಪಿ ಸರ್ಕಾರ ಮಾಡಿದೆ. ಅರ್ಥಶಾಸ್ತ್ರ ಅಂಬೇಡ್ಕರ್‌ಗೆ ಆಸಕ್ತಿ ಇದ್ದ ವಿಷಯವಾಗಿತ್ತು. ಆದರೆ ಅವರು ಕೇಂದ್ರದಲ್ಲಿ ಹಣಕಾಸು ಸಚಿವರಾಗಲು ಸಾಧ್ಯವಾಗಲಿಲ್ಲ. ಯಾವುದೇ ಸರ್ಕಾರಗಳು ಬರಲಿ, ಒಳ್ಳೆಯರೇ ಬರಲಿ ಕೆಟ್ಟವರೇ ಬರಲಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ ಎಂದು ಅಂಬೇಡ್ಕರ್ ಅವರನ್ನು ಹಾಡಿ ಹೊಗಳಿದರು.
ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಒಡೆಯರ್ ಅವರು ಪೌರ ಕಾರ್ಮಿಕರು ಹಾಗೂ ಅವರ ಮಕ್ಕಳಿಗೆ ಸನ್ಮಾನಿಸಿ ಅಭಿನಂದಿಸಿದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…