ಮೈಸೂರು ನಗರ

ಮೈಸೂರು | ವೈದ್ಯರ ವರ್ತನೆಗೆ ರೋಸಿಹೋದ ರೋಗಿಗಳು: ಆಸ್ಪತ್ರೆ ಮುಂದೆಯೇ ದಿಢೀರ್‌ ಪ್ರತಿಭಟನೆ

ಮೈಸೂರು: ವೈದ್ಯರೊಬ್ಬರ ವರ್ತನೆಗೆ ಬೇಸತ್ತ ರೋಗಿಗಳು ವೈದ್ಯರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಚಿಕಿತ್ಸೆಗೆ ಬಂದ ರೋಗಿಗಳೇ ಪ್ರತಿಭಟನೆ ನಡೆಸಿದ್ದಾರೆ.

ವೈದ್ಯರ ವರ್ತನೆ ಸರಿಯಿಲ್ಲ ಎಂದು ಆರೋಪಿಸಿರುವ ರೋಗಿಗಳು, ವೈದ್ಯರನ್ನು ಬದಲಾಯಿಸಿ ಇಲ್ಲವೇ ಆಸ್ಪತ್ರೆಯನ್ನೇ ಮುಚ್ಚಿಸಿ ಎಂದು ಆಗ್ರಹಿಸಿದ್ದಾರೆ.

ವೈದ್ಯರು ರೋಗಿಗಳ ಜೊತೆ ಸರಿಯಗಿ ಸ್ಪಂದಿಸಲ್ಲ. ರೋಗಿಗಳನ್ನು ಬಾಯಿಗೆ ಬಂದಂತೆ ಬೈಯ್ಯುತ್ತಾರೆ ಎಂದು ಗಂಭೀರ ಆರೋಪ ಮಾಡಿದರು.

ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿ ಡಿಎಚ್‌ಓ ಕುಮಾರಸ್ವಾಮಿ ಅವರು ತಕ್ಷಣವೇ ವೈದ್ಯರನ್ನು ಬದಲಾಯಿಸುವ ಭರವಸೆ ನೀಡಿದರು. ಬಳಿಕ ರೋಗಿಗಳು ಚಿಕಿತ್ಸೆ ಪಡೆಯದೇ ವಾಪಸ್‌ ತೆರಳಿದರು.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ| ಹೊನ್ನೇರು ಕಟ್ಟಿ ಯುಗಾದಿ ಹಬ್ಬ ಮಾಡಿದ ಗ್ರಾಮಸ್ಥರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ…

45 mins ago

ಭಾರತೀಯ ಕರೆನ್ಸಿಗೆ ಐತಿಹಾಸಿಕ ಪೆಟ್ಟು: ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…

60 mins ago

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

2 hours ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

2 hours ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

2 hours ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

6 hours ago