ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಬಹುಮಾಧ್ಯಮ ಕೇಂದ್ರ (ಇಎಂಆರ್.ಸಿ) ನಿರ್ದೇಶಕರ ಹುದ್ದೆಗೆ ನೇಮಕ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಗಸ್ಟ್ 22 ರಿಂದ ಸೆಪ್ಟಂಬರ್ 11 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮಾಹಿತಿ ಮತ್ತು ಅರ್ಜಿಯ ನಮೂನೆ ಬಗ್ಗೆ ಮೈಸೂರು ವಿಶ್ವವಿದ್ಯಾನಿಲಯದ ವೆಬ್ ಸೈಟ್ www.uni-mysore.ac.in ನಲ್ಲಿ ಲಭ್ಯವಿರುತ್ತದೆ. ಆಸಕ್ತ ಅಭ್ಯರ್ಥಿಗಳು ವಿವರಗಳನ್ನು ಮತ್ತು ನಿಗದಿತ ಅರ್ಜಿ ನಮೂನೆಗಳನ್ನು ಮೇಲ್ಕಂಡ ವೆಬ್ಸೈಟ್ನಿಂದ ಪಡೆಯಬಹುದಾಗಿರುತ್ತದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





