Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಅರವಿಂದ್‌ ಬೆಲ್ಲದ್‌ ವಿರುದ್ಧ ಎಂಎಲ್‌ಸಿ ಎಚ್.ವಿಶ್ವನಾಥ್‌ ಕಿಡಿ

ಮೈಸೂರು: ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಬಗ್ಗೆ ಸ್ವಪಕ್ಷೀಯ ನಾಯಕ ಅರವಿಂದ್‌ ಬೆಲ್ಲದ್‌ ನೀಡಿರುವ ಹೇಳಿಕೆಗೆ ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ.

ಈ ಬಗ್ಗೆ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದೇಶದಲ್ಲಿ ಓದಿದ್ದ ಅರವಿಂದ್‌ ಬೆಲ್ಲದ್‌ಗೆ ಕರ್ನಾಟಕ ಇತಿಹಾಸದ ಬಗ್ಗೆ ಏನೂ ಗೊತ್ತಿಲ್ಲ. ಹೀಗಾಗಿ ಅವರು ಈ ಬಗ್ಗೆ ಮಾತನಾಡಿದ್ದಾರೆ ಎಂದು ಕಿಡಿಕಾರಿದರು.

ಬಡವರ ಕಷ್ಟ ತಿಳಿಯದೇ ಲಿಂಗಾಯತರಿಗೆ ಅವರು ಮೀಸಲಾತಿ ನೀಡಿಲ್ಲ ಎಂದು ಅರವಿಂದ್‌ ಬೆಲ್ಲದ್‌ ದೇವರಾಜ ಅರಸು ಬಗ್ಗೆ ಮಾತನಾಡಿದ್ದಾರೆ. ಸಂವಿಧಾನ ಜಾರಿಗೆ ಬರುವ ಮುನ್ನವೇ ರಾಜಪ್ರಭುತ್ವದಲ್ಲಿ ಮೈಸೂರು ಮಹಾರಾಜರು ಮೀಸಲಾತಿ ನೀಡಿದ್ದಾರೆ.

3ಬಿನಲ್ಲಿ ಲಿಂಗಾಯತರಿಗೆ ಈಗಲೂ ಮೀಸಲಾತಿ ಇದೆ. ದೇವರಾಜ ಅರಸು ಅವರು ಯಾವುದೇ ಒಂದು ಜಾತಿ ಪರವಾಗಿ ಕೆಲಸ ಮಾಡಿಲ್ಲ ಎಂದು ಅರವಿಂದ್‌ ಬೆಲ್ಲದ್‌ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು.

 

Tags: