ಮೈಸೂರು: ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಬಗ್ಗೆ ಸ್ವಪಕ್ಷೀಯ ನಾಯಕ ಅರವಿಂದ್ ಬೆಲ್ಲದ್ ನೀಡಿರುವ ಹೇಳಿಕೆಗೆ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದೇಶದಲ್ಲಿ ಓದಿದ್ದ ಅರವಿಂದ್ ಬೆಲ್ಲದ್‌ಗೆ ಕರ್ನಾಟಕ ಇತಿಹಾಸದ ಬಗ್ಗೆ ಏನೂ ಗೊತ್ತಿಲ್ಲ. ಹೀಗಾಗಿ ಅವರು ಈ ಬಗ್ಗೆ ಮಾತನಾಡಿದ್ದಾರೆ ಎಂದು ಕಿಡಿಕಾರಿದರು.
ಬಡವರ ಕಷ್ಟ ತಿಳಿಯದೇ ಲಿಂಗಾಯತರಿಗೆ ಅವರು ಮೀಸಲಾತಿ ನೀಡಿಲ್ಲ ಎಂದು ಅರವಿಂದ್ ಬೆಲ್ಲದ್ ದೇವರಾಜ ಅರಸು ಬಗ್ಗೆ ಮಾತನಾಡಿದ್ದಾರೆ. ಸಂವಿಧಾನ ಜಾರಿಗೆ ಬರುವ ಮುನ್ನವೇ ರಾಜಪ್ರಭುತ್ವದಲ್ಲಿ ಮೈಸೂರು ಮಹಾರಾಜರು ಮೀಸಲಾತಿ ನೀಡಿದ್ದಾರೆ.
3ಬಿನಲ್ಲಿ ಲಿಂಗಾಯತರಿಗೆ ಈಗಲೂ ಮೀಸಲಾತಿ ಇದೆ. ದೇವರಾಜ ಅರಸು ಅವರು ಯಾವುದೇ ಒಂದು ಜಾತಿ ಪರವಾಗಿ ಕೆಲಸ ಮಾಡಿಲ್ಲ ಎಂದು ಅರವಿಂದ್ ಬೆಲ್ಲದ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು.
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…
ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…
ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.…
ಬೆಂಗಳೂರು : ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ…