ಮೈಸೂರು ನಗರ

ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅವಶ್ಯ : ರೇಡಿಯೋ ಕಿಸಾನ್‌ ಕಾರ್ಯಕ್ರಮದಲ್ಲಿ ಹರಿಣಿಕುಮಾರ್‌

ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ ಡಾ.ಕೆ.ಎಂ.ಹರಿಣಿ ಕುಮಾರ್ ಹೇಳಿದರು.

ರೇಡಿಯೋ ಕಿಸಾನ್ ದಿನದ ಸಂದರ್ಭದಲ್ಲಿ ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಹಾಗೂ ಕೃಷಿ ನವೋದ್ಯಮಗಳನ್ನು ಕುರಿತು ಭಾರತೀಯ ಭಾಷಾ ಸಂಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿಯ ಭವಿಷ್ಯವನ್ನು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸುವ ಮೂಲಕ ಉಜ್ವಲಗೊಳಿಸಬಹುದು ಎಂದು ಹೇಳಿದರು.

ಭಾರತದ ಕೃಷಿ ಭೂಮಿಯು ಸ್ವರ್ಗದ ಭೂಮಿ ಆದರೆ ರಾಸಾಯನಿಕಗಳ ಅತಿಯಾದ ಬಳಕೆಯಿಂದ ನಾವು ಅದನ್ನು ನರಕದ ಭೂಮಿಯಾಗಿ ಬದಲಾವಣೆ ಮಾಡುತ್ತಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕೃಷಿ ಕ್ಷೇತ್ರವು ದೇಶದ ಸಾಮಾಜಿಕ ಆರ್ಥಿಕ ವ್ಯವಸ್ಥೆಯ ಅಡಿಪಾಯಯವಾಗಿದೆ. ಗ್ರಾಮೀಣ ಬದುಕು ಈ ಕೃಷಿಯಿಂದಲೇ ನಡೆಯುತ್ತಿದೆ. ಆಹಾರ ಭದ್ರತೆ ಹಾಗೂ ವಿವಿಧ ರೀತಿಯ ಆಹಾರ ಸಂಸ್ಕರಣೆಯಿಂದ ಅತಿ ಹೆಚ್ಚು ಉದ್ಯೋಗವನ್ನು ಸೃಷ್ಟಿಸಬಹುದು ಎಂದು ಹೇಳಿದರು.

ಕೃಷಿ ಕ್ಷೇತ್ರ ಶೇ.46% ರಷ್ಟು ಜನಸಂಖ್ಯೆಗೆ ನೇರ ಮತ್ತು ಪರೋಕ್ಷವಾಗಿ ಉದ್ಯೋಗವನ್ನು ಒದಗಿಸುತ್ತಿದ್ದು, ಒಟ್ಟು ದೇಶಿಯ ಉತ್ಪನ್ನಕ್ಕೆ ಶೇಕಡ 18 % ರಷ್ಟು ಜಿಡಿಪಿಯನ್ನು ಕೊಡುಗೆಯಾಗಿ ಕೃಷಿ ಕ್ಷೇತ್ರ ನೀಡುತ್ತಿದೆ. ಕೃಷಿಯನ್ನು ನಂಬಿ ನಡೆಯುವ ಕೈಗಾರಿಕೆಗಳು ಆರ್ಥಿಕವಾಗಿ ಸದೃಢವಾಗಲು ಹೊಸ ಆಯಾಮಗಳನ್ನು ರೂಪಿಸಿಕೊಳ್ಳಬೇಕಿದೆ ಎಂದರು‌.

ಸರ್ಕಾರ ಕೃಷಿ ಕ್ಷೇತ್ರಕ್ಕೆ ಬಹಳಷ್ಟು ಕೊಡುಗೆಗಳನ್ನು ನೀಡುತ್ತಿದ್ದರು ಕೃಷಿ ಕ್ಷೇತ್ರದಲ್ಲಿ ಹವಾಮಾನ ಬದಲಾವಣೆ, ಕೃಷಿ ವೆಚ್ಚದ ಏರಿಕೆ, ಬೆಳೆಯ ಅಪಾಯಗಳು ಮಾರುಕಟ್ಟೆಯ ಅಸ್ಥಿರತೆಗಳಿಂದ ಕೃಷಿ ಕ್ಷೇತ್ರದಲ್ಲಿ ತೊಂದರೆಗಳನ್ನು ಅನುಭವಿಸಲಾಗುತ್ತಿದೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ದತ್ತಾಂಶ ಆಧಾರಿತ ಹಾಗೂ ಮುಂಚಿತ ನಿರ್ಧಾರಗಳನ್ನು ಕೈಗೊಳ್ಳಲು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಸಹಾಯವನ್ನು ಬಳಸಿಕೊಳ್ಳಬಹುದಾಗಿದೆ. ಕೃತಕ ಬುದ್ಧಿಮತ್ತೆಯಿಂದ ರೈತರ ಜೀವನೋಪಾಯವನ್ನು ಬದಲಾವಣೆ ಮಾಡಲು ಅತ್ಯಂತ ಸಹಾಯಕವಾಗಿದೆ. ರೈತರು ಜ್ಞಾನವನ್ನು ಹೆಚ್ಚು ಗಳಿಸುವಲ್ಲಿ ಕೃತಕ ಬುದ್ಧಿಮತ್ತೆಯು ಸಹಾಯಕವಾಗಿದೆ ಎಂದು ತಿಳಿಸಿದರು.

ಆಕಾಶವಾಣಿಯ ಸಹಾಯಕ ನಿರ್ದೇಶಕರಾದ ಮಂಜುನಾಥ್ ಎನ್. ಬೇದ್ರೆ ಅವರು ಮಾತನಾಡಿ, ಕೃಷಿ ಕ್ಷೇತ್ರಕ್ಕೆ ಆಕಾಶವಾಣಿ ರೇಡಿಯೋ ಮಹತ್ತರ ಪ್ರಾಮುಖ್ಯತೆ ಪಾತ್ರ ವಹಿಸಿಕೊಂಡು ಮುನ್ನಡೆಸುತ್ತ ಬರುತ್ತಿದೆ. ಆಕಾಶವಾಣಿಯಲ್ಲಿ ಬರುವ ಕೃಷಿ ಕಾರ್ಯಕ್ರಮಗಳಲ್ಲಿ ಇನ್ನು ಹೊಸ ಹೊಸ ವಿನೂತನ ಕಾರ್ಯಕ್ರಮಗಳನ್ನು ರೈತರಿಗೆ ಹಂತ ಹಂತ ವಾಗಿ ತಲುಪಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಆಕಾಶವಾಣಿಯಲ್ಲಿ ನಡೆಸುವ ಕೃಷಿ ರಂಗದ ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಆ ಕ್ಷಣದ ಅಗತ್ಯಗಳನ್ನು ಕೃಷಿ ರಂಗದ ಕಾರ್ಯಕ್ರಮದಲ್ಲಿ ರೈತರಿಗೆ ತಿಳಿಸಲಾಗುತ್ತಿದೆ ಎಂದು ಹೇಳಿದರು.

ಕೃತಕ ಬುದ್ಧಿಮತ್ತೆಯನ್ನು ಇತ್ತೀಚಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಅಳವಡಿಸಿಕೊಳ್ಳಲಾಗುತ್ತಿದೆ ಹಾಗಾಗಿ ಕೃಷಿ ಕ್ಷೇತ್ರದಲ್ಲೂ ಕೃತಕ ಬುದ್ಧಿಮತ್ತೆಯನ್ನು ಅಳವಡಿಸಿಕೊಂಡರೆ ರೈತರಿಗೆ ಸಹಾಯಕವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ಭಾಷಾ ಸಂಸ್ಥಾನ ನಿರ್ದೇಶಕರಾದ ಪ್ರೊ.ಶೈಲೇಂದ್ರ ಮೋಹನ್,ಆಕಾಶವಾಣಿ ಕಾರ್ಯಕ್ರಮದ ನಿರ್ವಾಹಕರಾದ ಎನ್. ಕೇಶವ ಮೂರ್ತಿ, ಗಣ್ಯರಾದ ಪಿ.ಆನಂದ್ ಮತ್ತಿತರರು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸರಗೂರು| ಹೆಣ್ಣು ಹುಲಿ ಸೆರೆ: ನಿರಾಳರಾದ ಗ್ರಾಮಸ್ಥರು

ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…

55 mins ago

ಮಕ್ಳಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ನನ್ನ ಮನಸ್ಸಿನಲ್ಲಿ ಆಳವಾಗಿ ಇಳಿದ ಗಾಂಧಿಯವರ ಅಹಿಂಸಾ ಮಾರ್ಗ ಗಾಂಧಿಜಿ ಅವರ ಅಹಿಂಸಾ ಮಾರ್ಗ ಮತ್ತು ಸತ್ಯಾಗ್ರಹ ಚಳವಳಿಗಳು ನನ್ನ…

1 hour ago

ಭಾರತದ ಗಾಂಧಿ ಮತ್ತು ಆಫ್ರಿಕಾದ ಗಾಂಧಿ

ಡಾ.ಎಂ.ಡಿ.ಉಮೇಶ ನೆಲ್ಸನ್ ಮಂಡೇಲಾರವರ ಮೇಲೆ ಗಾಂಧೀಜಿ ಅವರು ಆಳವಾದ ಪ್ರಭಾವವನ್ನು ಬೀರಿದ್ದರು. ಮುಖ್ಯವಾಗಿ ಅಹಿಂಸಾತ್ಮಕ ಪ್ರತಿರೋಧ ಮತ್ತು ಸತ್ಯಾಗ್ರಹದ ಮೂಲಕ…

1 hour ago

ಕಾಪಿ ಮಾಡು ಎಂದು ಹೇಳಿದ ಗುರುಗಳ ಮಾತನ್ನು ಧಿಕ್ಕರಿಸಿದೆ, ಆದರೆ ಅವರನ್ನು ದ್ವೇಷಿಸಲಿಲ್ಲ

ನಮ್ಮ ತಂದೆ ಪೋರ್‌ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…

4 hours ago

ರಾಷ್ಟ್ರಪಿತನ ‘ಸತ್ಯಾನ್ವೇಷಣೆ’ಗೆ ನೂರು ವರುಷ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…

4 hours ago

ಡಿಜಿಟಲ್ ವೇದಿಕೆಗಳಲ್ಲಿ ಅಶ್ಲೀಲತೆಯ ಆರ್ಭಟ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು…

4 hours ago