ಮೈಸೂರು ನಗರ

ವಿಷ್ಣು ವರ್ಧನ್‌ ಪುಣ್ಯಸ್ಮರಣೆ ಅಂಗವಾಗಿ ಅಭಿಮಾನಿಗಳಿಂದ ರಕ್ತದಾನ, ಕೋಟಿಗೊಬ್ಬ ಕ್ಯಾಲೆಂಡರ್‌ ಅನಾವರಣ

ಮೈಸೂರು: ವಿಷ್ಣು ವರ್ಧನ್‌ ಅವರ 15ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅಭಿಮಾನಿಗಳು ರಕ್ತದಾನ ಮತ್ತು ಕೋಟಿಗೊಬ್ಬ ಕ್ಯಾಲೆಂಡರ್‌ಅನ್ನು ಅನಾವರಣ ಮಾಡಿದ್ದಾರೆ.

ಇಂದು (ಡಿಸೆಂಬರ್‌.30) ನಟ ವಿಷ್ಣುವರ್ಧನ್‌ ಅವರ 15ನೇ ಪುಣ್ಯಸ್ಮರಣೆ ಪ್ರಯುಕ್ತ ನಗರದ ಎಚ್‌.ಡಿ.ಕೋಟೆ ರಸ್ತೆಯ ಉದ್ಬೂರು ಗೇಟ್‌ ಸಮೀಪದಲ್ಲಿರುವ ವಿಷ್ಣುವರ್ಧನ್‌ ಸ್ಮಾರಕಕ್ಕೆ ನೂರಾರು ಜನ ಭೇಟಿ ನೀಡಿದ್ದಾರೆ. ಈ ವೇಳೆ ಅವರ ಕುಟುಂಬಸ್ಥರಾದ ಅವರ ಪತ್ನಿ ಭಾರತಿ ವಿಷ್ಣು ವರ್ಧನ್‌ ಹಾಗೂ ಅಳಿಯ ಅನಿರುದ್ಧ್‌ ಅವರು ಕೂಡ ಸ್ಮಾರಕಕ್ಕೆ ಭೇಟಿ ನೀಡಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ, ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ವಿಷ್ಣು ವರ್ಧನ್‌ ಅಭಿಮಾನಿಗಳ ಸಂಘದ ವತಿಯಿಂದ ಅನ್ನ ಸಂತರ್ಪಣೆಯನ್ನು ಸಾರ್ವಜನಿಕರಿಗೆ ನೆರವೇರಿಸಿದ್ದಾರೆ.

ಈ ಸಂದರ್ಭದಲ್ಲಿ ಜೀವಧಾರ ರಕ್ತ ನಿಧಿ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಸುಮಾರು 60ಕ್ಕೂ ಅಧಿಕ ಅಭಿಮಾನಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದ್ದಾರೆ. ಬಳಿಕ ವಿಷ್ಣು ವರ್ಧನ್‌ ಅಭಿಮಾನಿ ಬಳಗವೂ ಭಾರತಿ ವಿಷ್ಣು ವರ್ಧನ್‌ ಹಾಗೂ ಅನಿರುದ್ಧ ಅವರಿಂದ ವಿಷ್ಣು ವರ್ಧನ್‌ ಅವರ 2025ರ ಕೋಟಿಗೊಬ್ಬ ಕ್ಯಾಲೆಂಡರ್‌ ಅನ್ನು ಅನಾವರಣಗೊಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 mins ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

4 mins ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

11 mins ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

16 mins ago

ಜಂಬೂಸವಾರಿಯಲ್ಲಿ ಈ ಬಾರಿ ತಾರಾ ಮೆರುಗು

ಕೆ.ಬಿ.ರಮೇಶನಾಯಕ ರವಿಚಂದ್ರನ್, ಶಿವರಾಜ್‌ಕುಮಾರ್, ಯಶ್, ರಿಷಭ್ ಶೆಟ್ಟಿ, ರಚಿತಾ ರಾಮ್, ಸಪ್ತಮಿ ಗೌಡ ಸೇರಿ ೩೦ ಕಲಾವಿದರು ಭಾಗಿ ಮೈಸೂರು:…

23 mins ago