asha karyakarte
ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮೈಸೂರಿನ ಗಾಂಧಿ ಸರ್ಕಲ್‌ನಲ್ಲಿ ಜಮಾಯಿಸಿದ ಆಶಾ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಆಶಾ ಕಾರ್ಯಕರ್ತೆಯರು, ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ರೂ.10 ಸಾವಿರ ಗ್ಯಾರಂಟಿಯನ್ನು ಈ ಏಪ್ರಿಲ್ ಇಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು.
2025 ಮಾರ್ಚ್ ರಾಜ್ಯ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ರೂ. 1000 ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು.
ತರ್ಕಬದ್ದಗೊಳಿಸುವ ಹೆಸರಿನಲ್ಲಿ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಿ. ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.
ಅವೈಜ್ಞಾನಿಕ ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು. ನಗರ ಆಶಾಗಳಿಗೆ ರೂ.2000 ಗೌರವಧನ ಹೆಚ್ಚಿಸಬೇಕು. 2025 ಜೂನ್-ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂಬ ಹಕ್ಕೋತ್ತಾಯ ಮಂಡಿಸಿದ್ದಾರೆ.
ನಮ್ಮ ಬೇಡಿಕೆಗಳನ್ನು ಈಡೇರುವವರೆಗೂ ಹೋರಾಟ ನಿಲ್ಲಲ್ಲ ಎಂದು ಎಚ್ಚರಿಕೆ ನೀಡಿರುವ ಆಶಾ ಕಾರ್ಯಕರ್ತೆಯರು, ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…