ಮೈಸೂರು : ಆಶಾ ಕಾರ್ಯಕರ್ತೆಯರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಆ.12ರಿಂದ 14ರವರೆಗೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ ಹೇಳಿದರು.
ರಾಜ್ಯಾದ್ಯಂತ ನಡೆಯುವ ಅಹೋರಾತ್ರಿ ಧರಣಿ ಹಿನ್ನೆಲೆಯಲ್ಲಿ ಜಿಲ್ಲಾ ಸಮಿತಿ ವತಿಯಿಂದ ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕನಿಷ್ಠ 10 ಸಾವಿರ ರೂ. ಕಡ್ಡಾಯವಾಗಿ ನಿಗದಿಯಾಗಬೇಕು. ಬಿಸಿಯೂಟ ಕಾರ್ಯಕರ್ತೆಯರಿಗೆ ನೀಡಿದ ಒಂದು ಸಾವಿರ ರೂ. ಪ್ರೋತ್ಸಾಹಧನವನ್ನು ಆಶಾ ಕಾರ್ಯಕರ್ತೆಯರಿಗೂ ನೀಡಬೇಕು. ತರ್ಕಬದ್ಧಗೊಳಿಸಿ ಆಶಾ ಕಾರ್ಯಕರ್ತೆಯರ ಸಂಖ್ಯೆಯನ್ನು ಕಡಿತಗೊಳಿಸಬಾರದು, ಅವೈಜ್ಞಾನಿಕ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಹಕ್ಕೊತ್ತಾಯ ಮಾಡಲಾಗುವುದು ಎಂದರು.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಭಾಗ್ಯ, ಜಿಲ್ಲಾ ಉಪಾಧ್ಯಕ್ಷೆ ಮಣಿಲಾ, ನಗರ ಅಧ್ಯಕ್ಷೆ ಕೋಮಲಾ ಹಾಜರಿದ್ದರು.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…