ಮೈಸೂರು ನಗರ

ಆ.12 ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಮೈಸೂರು : ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಆ.12 ರಿಂದ 14 ರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಮಿತಿ ವತಿಯಿಂದ ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈ ಹಿಂದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದಾಗ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡುವ ಗೌರವಧನವನ್ನು ಕ್ರೋಢಿಕರಿಸಿ 10 ಸಾವಿರ ರೂ. ನಿಗದಿ ಮಾಡಿ, ಬಜೆಟ್‌ನಲ್ಲಿ ವಿಶಿಷ್ಟ ಯೋಜನೆಯನ್ನು ಏಪ್ರಿಲ್‌ನಲ್ಲಿ ನೀಡುವುದಾಗಿ ರಾಜ್ಯ ಸರ್ಕಾರದಿಂದ ಭರವಸೆ ನೀಡಲಾಗಿತ್ತು.

ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ ಕನಿಷ್ಠ 10 ಸಾವಿರ ರೂ. ನಿಗದಿಯಾಗಬೇಕು. ಬಿಸಿಯೂಟ ಕಾರ್ಯಕರ್ತೆಯರಿಗೆ ನೀಡಿದಂತೆ 1 ಸಾವಿರ ರೂ. ಪ್ರೋತ್ಸಾಹಧನವನ್ನು ಆಶಾ ಕಾರ್ಯಕರ್ತೆಯರಿಗೂ ನೀಡಬೇಕು. ಆಶಾ ಕಾರ್ಯಕರ್ತೆಯರ ಸಂಖ್ಯೆಯನ್ನು ಕಡಿತಗೊಳಿಸಬಾರದು, ಅವೈಜ್ಞಾನಿಕ ಕಾರ್ಯನಿರ್ವ ಹಣಾ ಮೌಲ್ಯಮಾಪನ ಕೈಬಿಡಬೇಕು ಎಂದು ಒತ್ತಾಯಿಸಿದರು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷರಾದ ಭಾಗ್ಯ, ಉಪಾಧ್ಯಕ್ಷರಾದ ಮಣಿಲಾ, ನಗರ ಅಧ್ಯಕ್ಷರಾದ ಕೋಮಲ, ಜಿಲ್ಲಾ ಸಲಹೆಗಾರ್ತಿ ಪಿ.ಎಸ್.ಸಂಧ್ಯಾ, ಪವಿತ್ರಾ, ಸೀಮಾ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

5 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

6 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

7 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

7 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

7 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

11 hours ago