ಮೈಸೂರು: ನಾಳೆ ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ.
ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ಹಾಗೂ ದರ್ಶನಕ್ಕೆ ಸಿದ್ಧತೆ ಭರದಿಂದ ಸಾಗಿದ್ದು, ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಮೈಸೂರು ಜಿಲ್ಲಾಡಳಿತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ದೇವಿಯ ದರ್ಶನಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.
ನಾಳೆಯೂ ಸಾವಿರಾರು ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಹಲವಾರು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ನಾಳೆ ಬೆಟ್ಟಕ್ಕೆ ಭೇಟಿ ನೀಡಲಿರುವ ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಇರಲಿದ್ದು, ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೆಎಸ್‌ಆರ್‌ಟಿಸಿ ಮನವಿ ಮಾಡಿದೆ.





