ಮೈಸೂರು ನಗರ

ಆಷಾಢ ಶುಕ್ರವಾರ : ಚಾಮುಂಡಿ ಪಾದದ ಬಳಿಯೂ ಜನವೋ ಜನ

ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ರಾಜ್ಯದ ಮೂಲೆ ಮೂಲೆಗಳಿಂದಲೂ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿದೆ.

ಇನ್ನು ಚಾಮುಂಡಿ ಪಾದದ ಬಳಿಯೂ ಕೂಡ ಮೆಟ್ಟಿಲುಗಳನ್ನ ಹತ್ತಿಕೊಂಡು ಬಂದು ಚಾಮುಂಡೇಶ್ವರಿ ದರ್ಶನ ಪಡೆಯಲು ಸಾವಿರಾರು ಭಕ್ತರು ಬರುತ್ತಿದ್ದು, ಚಾಮುಂಡಿ ಪಾದದ ಬಳಿಯೂ ಕೂಡ ಸಕಲ ಸಿದ್ದತೆಯನ್ನ ಮಾಡಲಾಗಿದೆ. ಭಕ್ತರಿಗೆ ನೂಕು ನುಗ್ಗಲೂ ಉಂಟಾಗದಂತೆ ಹಾಗೂ ಯಾವುದೇ ರೀತಿ ತೊಂದರೆ ಉಂಟಾಗದಂತೆ ಬ್ಯಾರಿಕೇಡ್‌ ವ್ಯವಸ್ಥೆ ಮಾಡಲಾಗಿದ್ದು, ಸ್ಥಳದಲ್ಲಿ ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿದೆ. ಅಲ್ಲದೆ ವಾಹನ ನಿಲುಗಡೆಗೂ ಕೂಡ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ.

ಇನ್ನು ಮಹಿಳೆಯರು ಕೂಡ 1001 ಮೆಟ್ಟಿಲುಗಳಿಗೂ ಅರಿಶಿಣ , ಕುಂಕುಮ ಮತ್ತು ಹೂಗಳನ್ನ ಇಟ್ಟು  ʼನಮ್ಮ ಇಷ್ಟಾರ್ಥ ನೆರವೇರಿಸುವ ತಾಯಿʼ ಎಂದು ವಿಶೇಷ ಪ್ರಾರ್ಥನೆಯೊಂದಿಗೆ ಮೆಟ್ಟಿಲು ಹತ್ತಿ ದೇವಿ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

18 mins ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

32 mins ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

57 mins ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

1 hour ago

ಕೊಡಗು | ಟೆಕ್ಕಿ ಶರಣ್ಯ ಕೊನೆಗೂ ಪತ್ತೆ

ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊ‌ನೆಗೂ ಪತ್ತೆ…

1 hour ago

ತಮಿಳುನಾಡು ಚುನಾವಣೆ : ಅಫಿಡವಿಟ್‌ನಲ್ಲಿ 2 ಕ್ರಿಮಿನಲ್‌ ಪ್ರಕರಣ ಘೋಷಿಸಿಕೊಂಡ ವಿಜಯ್‌

ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…

2 hours ago