ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ರಾಜ್ಯದ ಮೂಲೆ ಮೂಲೆಗಳಿಂದಲೂ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿದೆ.
ಇನ್ನು ಚಾಮುಂಡಿ ಪಾದದ ಬಳಿಯೂ ಕೂಡ ಮೆಟ್ಟಿಲುಗಳನ್ನ ಹತ್ತಿಕೊಂಡು ಬಂದು ಚಾಮುಂಡೇಶ್ವರಿ ದರ್ಶನ ಪಡೆಯಲು ಸಾವಿರಾರು ಭಕ್ತರು ಬರುತ್ತಿದ್ದು, ಚಾಮುಂಡಿ ಪಾದದ ಬಳಿಯೂ ಕೂಡ ಸಕಲ ಸಿದ್ದತೆಯನ್ನ ಮಾಡಲಾಗಿದೆ. ಭಕ್ತರಿಗೆ ನೂಕು ನುಗ್ಗಲೂ ಉಂಟಾಗದಂತೆ ಹಾಗೂ ಯಾವುದೇ ರೀತಿ ತೊಂದರೆ ಉಂಟಾಗದಂತೆ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದ್ದು, ಸ್ಥಳದಲ್ಲಿ ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿದೆ. ಅಲ್ಲದೆ ವಾಹನ ನಿಲುಗಡೆಗೂ ಕೂಡ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಇನ್ನು ಮಹಿಳೆಯರು ಕೂಡ 1001 ಮೆಟ್ಟಿಲುಗಳಿಗೂ ಅರಿಶಿಣ , ಕುಂಕುಮ ಮತ್ತು ಹೂಗಳನ್ನ ಇಟ್ಟು ʼನಮ್ಮ ಇಷ್ಟಾರ್ಥ ನೆರವೇರಿಸುವ ತಾಯಿʼ ಎಂದು ವಿಶೇಷ ಪ್ರಾರ್ಥನೆಯೊಂದಿಗೆ ಮೆಟ್ಟಿಲು ಹತ್ತಿ ದೇವಿ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…