ಮೈಸೂರು ನಗರ

ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಬರುವವರಿಗೆ ಸಿದ್ದವಾಯ್ತು 25 ಸಾವಿರ ಮೈಸೂರು ಪಾಕ್‌

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದರ್ಶನಕ್ಕೆ ಬರುವವರಿಗೆ ವಿಶೇಷ ಮೈಸೂರು ಪಾಕ್‌ ಸಿದ್ದವಾಗುತ್ತಿದೆ.

ಕಳೆದ 19 ವರ್ಷದಿಂದ ಪ್ರಸಾದ ವ್ಯವಸ್ಥೆ ಮಾಡುತ್ತಿರುವ ನೂರಡಿ ರಸ್ತೆಯ ಚಾಮುಂಡೇಶ್ವರಿ ಸೇವಾ ಸಮಿತಿ ಈ ಬಾರಿಯೂ ಪ್ರಸಾದ ವಿತರಣೆ ಮಾಡುತ್ತಿದೆ. ಅದಕ್ಕೆಂದೆ ದರ್ಶನಕ್ಕೆ ಬರುವವರಿಗೆ ವಿತರಿಸಲು 25 ಸಾವಿರ  ಮೈಸೂರು ಪಾಕ್‌ತಯಾರಿಸಲಾಗಿತ್ತಿದೆ.

ನಗರದ ನಿತ್ಯಾನಂದ ಕಲ್ಯಾಣ ಮಂಟಪದಲಿ 40 ಬಾಣಸಿಗರ ತಂಡದಿಂದ ಮೈಸೂರು ಪಾಕ್‌ ತಯಾರಿಸಲಾಗುತ್ತಿದ್ದು, ಶುಕ್ರವಾರದ ವೇಳೆಗೆ ತಯಾರಿಕೆ ಕಾರ್ಯ ಪೂರ್ಣಗೊಳ್ಳಲಿದೆ. ಪಾಕ್‌ ತಯಾರಿಕೆಗೆ 200 ಕೆ.ಜಿ ಕಡಳೆ ಹಿಟ್ಟು, 500 ಕೆ.ಜಿ ಸಕ್ಕರೆ, 30 ಕೆ.ಜಿ ಆಯಿಲ್‌, 100 ಕೆ.ಜಿ ತುಪ್ಪ 3 ಕೆ.ಜಿ ಏಲಕ್ಕಿ ಬಳಸಲಾಗಿದೆ.

ಆಷಾಡ ಮಾಸದ ಮೊದಲ ಶುಕ್ರವಾರದಂದು ಬೆಟ್ಟದ ಪಾರ್ಕಿಂಗ್‌ ಸ್ಥಳದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು, ಅಂದು ಬೆಳಿಗ್ಗೆಯಿಂದಲೇ ಪ್ರಸಾದ ವಿತರಣೆ ಆರಂಭವಾಗಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

23 mins ago

ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…

49 mins ago

ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವು

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…

58 mins ago

ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ದುರಂತ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…

3 hours ago

ಹಾಸನ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ: ಎಕರೆಗಟ್ಟಲೇ ಬಾಳೆ ಬೆಳೆ ನಾಶ

ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…

3 hours ago

ಗಂಡು ಮಗುವಿಗೆ ಜನ್ಮ ನೀಡಿದ ಡಾಲಿ ಧನಂಜಯ್ ಪತ್ನಿ ಧನ್ಯತಾ

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್‌…

4 hours ago