ಮೈಸೂರು: ಭ್ರೂಣಲಿಂಗ ಪತ್ತೆ ಸೆಂಟರ್ ಮೇಲೆ ಯಶಸ್ವಿ ದಾಳಿ ನಡೆಸಲಾಗಿದ್ದು, ಐವರನ್ನು ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇದು ರಾಜ್ಯ ಕಚೇರಿ ಹಾಗೂ ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿಯಾಗಿ ನಡೆಸಿದ ಹಠಾತ್ ಕಾರ್ಯಾಚರಣೆಯಾಗಿದೆ.
ಇದನ್ನು ಓದಿ : ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಬೆಳಕಿಗೆ: ಸಚಿವ ದಿನೇಶ್ ಗುಂಡೂರಾವ್ ರಿಯಾಕ್ಷನ್
ಅಲ್ಲಿಗೆ ಸ್ಕ್ಯಾನಿಂಗ್ ಮಾಡಿಸಲು ಹೋಗುತ್ತಿದ್ದ ಗರ್ಭಿಣಿಯರ ಮೇಲೆ ನಿಗಾ ಇಡಲಾಗಿತ್ತು, ಅವರನ್ನು ಮಾನಿಟರ್ ಮಾಡುವ ಮೂಲಕ ಈ ಕಾರ್ಯಾಚರಣೆ ನಡೆಸಲಾಗಿದೆ.
ಕಾರ್ಯಾಚರಣೆಯಲ್ಲಿ ಒಟ್ಟು 5 ಜನರನ್ನು ಬಂಧಿಸಲಾಗಿದೆ. ದಾಳಿಯ ವೇಳೆ ಇಬ್ಬರು ಗರ್ಭಿಣಿಯರು ಅಲ್ಲಿದ್ದರು. ಅವರ ಪೋಷಕರ ವಿರುದ್ಧವೂ ಪ್ರಕರಣ ದಾಖಲು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿ ಎಷ್ಟು ದಿನಗಳಿಂದ ಭ್ರೂಣ ಲಿಂಗ ಪತ್ತೆ ನಡೆಯುತ್ತಿತ್ತು. ಇಲ್ಲಿಯವರೆಗೆ ಎಷ್ಟು ಭ್ರೂಣ ಹತ್ಯೆ ನಡೆದಿವೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…